ಕನ್ನಡಪ್ರಭ ವಾರ್ತೆ ಕುಶಾಲನಗರ
ಅವರು ಕುಶಾಲನಗರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳಿಂದ ಶಿಬಿರ ನಡೆಯುತ್ತಿದ್ದು, ಈ ಮೂಲಕ ತರಬೇತು ಪಡೆದ ವಿದ್ಯಾರ್ಥಿಗಳು ಕ್ರೀಡಾ ಶಾಲೆಗಳಿಗೆ ನೇಮಕಗೊಳ್ಳುತ್ತಿದ್ದಾರೆ. ಶಿಬಿರದಲ್ಲಿ ಹಾಕಿ, ಅಥ್ಲೆಟಿಕ್ಸ್ ಮತ್ತು ಈಜು ಬಗ್ಗೆ ತರಬೇತಿ ನೀಡಲಾಗುತ್ತದೆ. ನುರಿತ ತರಬೇತುದಾರರ ಮೂಲಕ ಹದಿನೈದು ದಿನಗಳ ಕಾಲ ಶಿಬಿರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಎಂಟು ವರ್ಷದಿಂದ ಮೇಲ್ಪಟ್ಟವರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಕುಶಾಲನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಶಿಬಿರ ನಡೆಯಲಿದೆ. ಬೆಳಗ್ಗೆ 6:30 ರಿಂದ 8 ಗಂಟೆ ತನಕ ಹಾಕಿ ನಂತರ ಅಥ್ಲೆಟಿಕ್ಸ್ ತರಬೇತಿ ನೀಡಲಾಗುವುದು.ಈಜು ತರಬೇತಿಗೆ ಮಾತ್ರ ಖಾಸಗಿ ಈಜುಕೊಳ ಸೌಲಭ್ಯ ಹೊಂದಬೇಕಾದ ಕಾರಣ ಶಿಬಿರಾರ್ಥಿಗಳಿಗೆ ಕನಿಷ್ಠ ಶುಲ್ಕ ವಿಧಿಸಲಾಗುತ್ತದೆ ಎಂದರು.
ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಗ್ಗೆ ತಮ್ಮ ಸಂಸ್ಥೆ ಹೆಚ್ಚಿನ ಗಮನ ಹರಿಸಲಿದ್ದು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಪೂರ್ಣೇಶ್ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಪ್ರಕಾಶ್ ಪಳಂಗಪ್ಪ, ಸಹ ಕಾರ್ಯದರ್ಶಿ ಚಂದ್ರಶೇಖರ್, ಸಂಸ್ಥೆಯ ನಿರ್ದೇಶಕರಾದ ಅರುಣ್, ಮಹೇಶ್ ಇದ್ದರು.