ಕನ್ನಡಪ್ರಭ ವಾರ್ತೆ ಯಡ್ರಾಮಿ
ಆದರೆ, ಅದು ಕೆಟ್ಟರೆ ಮತ್ತೆ ದುರಸ್ತಿಗೊಳಿಸದೇ ಅಧಿಕಾರಿಗಳು ಕಡೆಗಣಿಸಿರುವುದರಿಂದ ಗ್ರಾಮಗಳಲ್ಲಿ ಮತ್ತೆ ಹಳೆಯ ಪದ್ಧತಿ ಮರಳುವಂತಿದೆ. ಯಡ್ರಾಮಿ ತಾಲೂಕಿನ ಮಳ್ಳಿ, ಕುಳಗೇರಿ, ಸುಂಬಡ, ಕಡಕೋಳ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟು ಹಲವು ವರ್ಷವೇ ಕಳೆದರೂ ಈವರೆಗೂ ಇದನ್ನು ಯಾರೂ ದುರಸಿಗೊಳಿಸಿಲ್ಲ.
ಈ ಗ್ರಾಮಗಳಲ್ಲಿ ಪ್ಲೊರೈಡ್ ಅಂಶ ಅಧಿಕವಾಗಿದ್ದು, ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ನಿತ್ಯ ಒಂದಲ್ಲ ಒಂದು ಅನಾರೋಗ್ಯಕ್ಕೆ ಸಿಲುಕಿ ಪರದಾಡುತ್ತಿದ್ದರು. ಈ ಹಿನ್ನೆಲೆ ಸರ್ಕಾರ ಶುದ್ಧ ನೀರಿನ ಘಟಕ ಅಳವಡಿಸಿತ್ತು. ಆದರೆ, ಯಂತ್ರಗಳು ಕೆಟ್ಟ ಬಳಿಕ ಕೇಳುವವರೇ ಇಲ್ಲ.ಗ್ರಾ.ಪಂ, ತಾ.ಪಂ, ಶಾಸಕರ ನಿರ್ಲಕ್ಷ್ಯ:
ಪ್ರತಿದಿನವೂ ಕೆಲಸ, ಕಾರ್ಯ ಬಿಟ್ಟು ದೂರದ ಊರುಗಳಿಗೆ ಅಲೆಯುವಂತಾಗಿದೆ. ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾ.ಪಂ.ಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ತಾ.ಪಂ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ. ಇನ್ನು ಶಾಸಕರ ಗಮನಕ್ಕೆ ತಂದರೂ ಆಸಕ್ತಿ ತೋರುತ್ತಿಲ್ಲ ಎಂದು ಗ್ರಾಮದ ಹಿರಿಯರು ಆರೋಪಿಸಿದ್ದಾರೆ.
ತಾಲೂಕಿನ ಗ್ರಾಮಗಳಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾಯನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ. ಲಕ್ಷಾಂತರ ರು. ಖರ್ಚು ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯು ವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.ಕೋಟ್..
- ನಿಂಗಣ್ಣ ಹಾದಿಮನಿ, ಮಳ್ಳಿ ಗ್ರಾಮಸ್ಥ
- ಮಾಂತೇಶ ಪುರಾಣಿಕ, ತಾ.ಪಂ. ಇಒ ಯಡ್ರಾಮಿ