)
ಕನ್ನಡಪ್ರಭ ವಾರ್ತೆ ಬೆಂಗಳೂರು/ರಾಮನಗರ
ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್‌ನ ಧ್ಯಾನಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ತೆರಳುವ ಒಂದೂವರೆ ತಾಸು ಮೊದಲು ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಾತಗುಣಿ ಬಳಿಯ ಒಡೆಯರಹಳ್ಳಿ ಗೇಟ್ ಬಳಿ ಬೆಳಗ್ಗೆ 10.30ರ ಸುಮಾರಿಗೆ ಈ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.
ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ, ಪ್ರಕರಣ ಕುರಿತು ತನಿಖೆಗೆ ಡಿವೈಎಸ್ಪಿ ನೇತೃತ್ವದಲ್ಲಿ ನಾಲ್ಕು ತನಿಖಾ ತಂಡಗಳನ್ನೂ ರಚಿಸಲಾಗಿದೆ.ಅನುಮಾನಾಸ್ಪದ ಪ್ಯಾಕೆಟ್‌ನಲ್ಲಿ ಪತ್ತೆ:ನೈಸ್ ರಸ್ತೆ ಜಂಕ್ಷನ್‌ನಿಂದ ಸುಮಾರು ಒಂದು ಕಿಲೋಮೀಟರ್ ಹಾಗೂ ರಸ್ತೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಕಾಂಪೌಂಡ್ ಬಳಿ ಅನುಮಾನಾಸ್ಪದ ಪ್ಯಾಕೆಟ್ ಒಂದನ್ನು ಕರ್ತವ್ಯ ನಿರತ ಕಾನ್‌ಸ್ಟೆಬಲ್ ಗಮನಿಸಿದ್ದಾರೆ. ಅದನ್ನು ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಕಂಡುಬಂದಿದೆ. ತಕ್ಷಣ ಅವರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆ್ಯಂಟಿ ಸಬೊಟೇಜ್ ಚೆಕ್ (ಎಎಸ್‌ಸಿ) ತಂಡ, ಬಾಂಬ್ ನಿಷ್ಕ್ರಿಯ ದಳ, ಎಫ್‌ಎಸ್‌ಎಲ್ ತಂಡ ಸ್ಥಳಕ್ಕೆ ದೌಡಾಯಿಸಿ ತೀವ್ರ ತಪಾಸಣೆ ನಡೆಸಿ ಜಿಲೆಟಿನ್ ಕಡ್ಡಿಗಳನ್ನು ತೆರವುಗೊಳಿಸಿದರು. ಯಾವುದೇ ಅಪಾಯವಿಲ್ಲ ಎಂದು ಖಚಿತವಾದ ನಂತರ ಪ್ರಧಾನಿಗಳು ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಘಟನೆ ಸಂಬಂಧ ಬೆಂಗಳೂರು ನಗರ ಪೊಲೀಸರು ಮತ್ತು ರಾಮನಗರ ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.
ಪ್ರಧಾನಿ ಸಾಗುವ ದಾರಿ ಉದ್ದಕ್ಕೂ 7 ಹಂತದ ಭದ್ರತೆ ಕಲ್ಪಿಸಲಾಗಿರುತ್ತದೆ. ಅಲ್ಲದೆ ಒಂದು ವಾರ ಮುಂಚಿತವಾಗಿ ತೀವ್ರ ಪರಿಶೀಲನೆ ನಡೆಸುತ್ತಾರೆ. ಇದರ ನಡುವೆಯೂ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಪೊಲೀಸರ ತಲೆ ಬಿಸಿ ಹೆಚ್ಚಿಸಿತ್ತು.
ಬೆಳಗ್ಗೆ 8 ಗಂಟೆ ಸುಮಾರಿಗೆ ತುರ್ತು ಸಹಾಯವಾಣಿ 112ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ಆರ್ಟ್ ಆಫ್ ಲಿವಿಂಗ್ ಬಳಿ ಸ್ಫೋಟ ನಡೆಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಇದರಿಂದ ತಕ್ಷಣ ಅಲರ್ಟ್ ಆದ ಬೆಂಗಳೂರು ಮತ್ತು ರಾಮನಗರ ಪೊಲೀಸರು ತಪಾಸಣೆ ಚುರುಕುಗೊಳಿಸಿದ್ದರು. ಬೆಂಗಳೂರು ಪೊಲೀಸರು ತಕ್ಷಣ ಎಚ್‌ಎಎಲ್ ಬಳಿ ತೀವ್ರ ಶೋಧ ನಡೆಸಿದ್ದಾರೆ. ಈ ಮಧ್ಯೆ, ರಾಮನಗರ ಪೊಲೀಸರು ಆರ್ಟ್ ಆಫ್ ಲಿವಿಂಗ್ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದಾಗ ಆಶ್ರಮದ ಹೊರಗಿನ ರಸ್ತೆಯ 50 ಮೀಟರ್ ದೂರದಲ್ಲಿ ಕಸದ ಬಳಿ 5 ಇಂಚಿನ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ.
ವಶಕ್ಕೆ ಪಡೆದು ವಿಚಾರಣೆ
ತನಿಖೆಗಾಗಿ ನಾಲ್ಕು ತಂಡ ರಚನೆ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣದ ತನಿಖೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ 50 ಪೊಲೀಸರನ್ನೊಳಗೊಂಡ ನಾಲ್ಕು ತಂಡಗಳನ್ನು ರಚಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಎಸ್ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ. ಜಿಲೆಟಿನ್ ಕಡ್ಡಿ ಹೇಗೆ ಬಂತು? ಯಾರು ತಂದು ಹಾಕಿದ್ದಾರೆ? ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಕಲ್ಲು ಕ್ವಾರಿ ಸ್ಫೋಟಿಸಲು ಬಳಸುವಂಥ ಸ್ಫೋಟಕ ಎಂಬ ಅನುಮಾನದ ಮೇರೆಗೆ ತಾತಗುಣಿ ಸುತ್ತಮುತ್ತಲಿನ ಕಾರ್ಮಿಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
-ಗಿರೀಶ್, ಕೇಂದ್ರ ವಲಯ ಡಿಐಜಿ
-ಶ್ರೀನಿವಾಸ್ ಗೌಡ, ಬೆಂಗಳೂರು ದಕ್ಷಿಣ ಜಿಲ್ಲೆ ಎಸ್ಪಿ