ಯಾವುದೇ ಸಾಧನೆಗೆ ಉತ್ತಮ ಜೀವನಶೈಲಿ ಮುಖ್ಯ: ನ್ಯಾ.ಕೆ.ವೇಲಾ

KannadaprabhaNewsNetwork |  
Published : Jun 27, 2025, 12:48 AM IST
ಕ್ಯಾಪ್ಷನ26ಕೆಡಿವಿಜಿ43, 44 ದಾವಣಗೆರೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ನಡೆದ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಜಾಥಾವನ್ನು ನ್ಯಾಯಾಧೀಶರಾದ ಕೆ.ವೇಲಾ ದಾಮೋದರ್ , ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಉದ್ಘಾಟಿಸಿದರು. ಎಸ್‌ಪಿ ಉಮಾ ಪ್ರಶಾಂತ್, ಎಎಸ್‌ಪಿ ಜಿ.ಮಂಜುನಾಥ ಇತರರು ಇದ್ದರು. | Kannada Prabha

ಸಾರಾಂಶ

ನಿತ್ಯ ನಾವು ಡ್ರಗ್ಸ್ ಬಗ್ಗೆ ಸಾಕಷ್ಟು ಪ್ರಕರಣಗಳನ್ನು ಗಮನಿಸುತ್ತಿದ್ದೇವೆ. ಇಂತಹ ವಸ್ತುಗಳು ಯುವಜನತೆ ಮೇಲೆ ಪರಿಣಾಮ ಬೀರುತ್ತವೆ. ಗಾಂಜಾ, ಅಫೀಮುನಂತಹ ಮಾದಕ ವಸ್ತುಗಳ ಬಗ್ಗೆ ಗಮನಕ್ಕೆ ಬಂದರೆ ತಕ್ಷಣ ಮಕ್ಕಳು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ಕೆ.ವೇಲಾ ದಾಮೋದರ್ ಹೇಳಿದ್ದಾರೆ.

- ಮಾದಕ ದ್ರವ್ಯ ವಿರೋಧಿ ದಿನ: ಜಾಗೃತಿ ಜಾಥಾಗೆ ಚಾಲನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ನಿತ್ಯ ನಾವು ಡ್ರಗ್ಸ್ ಬಗ್ಗೆ ಸಾಕಷ್ಟು ಪ್ರಕರಣಗಳನ್ನು ಗಮನಿಸುತ್ತಿದ್ದೇವೆ. ಇಂತಹ ವಸ್ತುಗಳು ಯುವಜನತೆ ಮೇಲೆ ಪರಿಣಾಮ ಬೀರುತ್ತವೆ. ಗಾಂಜಾ, ಅಫೀಮುನಂತಹ ಮಾದಕ ವಸ್ತುಗಳ ಬಗ್ಗೆ ಗಮನಕ್ಕೆ ಬಂದರೆ ತಕ್ಷಣ ಮಕ್ಕಳು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ಕೆ.ವೇಲಾ ದಾಮೋದರ್ ಹೇಳಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಅಂತರ ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಅಂಗವಾಗಿ ಆಯೋಜಿಸಿದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ನಿಮ್ಮ ಅಮೂಲ್ಯ ಜೀವನಶೈಲಿ ನಿಮ್ಮ ಕೈಯಲ್ಲೇ ಇದೆ. ನೀವು ಯಾವ ರೀತಿಯಾಗಿ ನಡೆಸಿಕೊಂಡು ಹೋಗಬೇಕೆನ್ನುವುದು ನಿಮಗೆ ತಿಳಿಸಿದೆ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದರೆ ಮೊದಲು ಒಳ್ಳೆಯ ಜೀವನಶೈಲಿ ರೂಪಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಮಾದಕ ವಸ್ತುಗಳಿಂದ ದೂರವಿರಬೇಕು. ಡ್ರಗ್ಸ್‌ ಮಾರಾಟ ವಿರುದ್ಧ ಸಹಾಯವಾಣಿ 1933ಗೆ ಕರೆ ಮಾಡಿ, ಮಾಹಿತಿ ನೀಡಬಹುದು ಎಂದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಮಾತನಾಡಿ, ಡ್ರಗ್ಸ್ ಚಾಕೊಲೇಟ್, ಸಿಹಿ ರೂಪದಲ್ಲಿರಬಹುದು. ಅದನ್ನು ತಿಂದರೆ ನಿಮಗೆ ಮತ್ತು ಬಂದಂತಾದರೆ, ಏನಾದರೂ ತೊಂದರೆಯಾದರೆ ಕೂಡಲೇ ಇಲಾಖೆ ಗಮನಕ್ಕೆ ತರಬೇಕು. ಆಗ ನಾವು ಕ್ರಮ ಕೈಗೊಳ್ಳುತ್ತೇವೆ. ಡ್ರಗ್ಸ್ ಮಾರಾಟ ನಡೆದಲ್ಲಿ ನಮ್ಮ ಸಹಾಯವಾಣಿ 1933 ಅಥವಾ 112ಗೆ ತಿಳಿಸಿದರೆ ಸಾಕು. ಎಲ್ಲಿಯೂ ಮಾಹಿತಿದಾರರಾದ ನಿಮ್ಮ ಹೆಸರು ಬರದಂತೆ ಗೌಪ್ಯತೆ ಕಾಪಾಡಲಾಗುತ್ತದೆ. ವಿದ್ಯಾರ್ಥಿಗಳು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ಕೈ ಜೋಡಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಜಿಪಂ ಸಿಇಒ ಗಿಟ್ಟೆ ಮಾಧವ ವಿಠ್ಠಲ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಎಸ್‌ಪಿ ಜಿ.ಮಂಜುನಾಥ, ಡಿಡಿಪಿಐ ಕೊಟ್ರೇಶ, ಡಿಡಿಪಿಯು ಕರಿಸಿದ್ದಪ್ಪ, ಡಿವೈಎಸ್‌ಪಿ ಪಿ.ಬಿ.ಪ್ರಕಾಶ್, ಸಂಚಾರಿ ವೃತ್ತ ನಿರೀಕ್ಷಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಕಾಲೇಜು ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಜಾಥಾವು ಹೈಸ್ಕೂಲ್ ಮೈದಾನದಿಂದ ಆರಂಭಗೊಂಡು ಪ್ರವಾಸಿ ಮಂದಿರ ರಸ್ತೆ, ಪಿ.ಬಿ. ರಸ್ತೆಯ ಆರ್.ಎಚ್. ಧರ್ಮಛತ್ರ, ಮಹಾನಗರ ಪಾಲಿಕೆ ಮುಖಾಂತರ ರೇಣುಕಾ ಮಂದಿರ ತಲುಪಿತು.

- - -

-26ಕೆಡಿವಿಜಿ43, 44:

ಜಾಥಾವನ್ನು ನ್ಯಾಯಾಧೀಶರಾದ ಕೆ.ವೇಲಾ ದಾಮೋದರ್, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಉದ್ಘಾಟಿಸಿದರು. ಎಸ್‌ಪಿ ಉಮಾ ಪ್ರಶಾಂತ್, ಎಎಸ್‌ಪಿ ಜಿ.ಮಂಜುನಾಥ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ