ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ: ಶಾಸಕ ಚನ್ನಬಸಪ್ಪ

KannadaprabhaNewsNetwork |  
Published : Sep 24, 2024, 01:56 AM IST
ಪೊಟೋ: 23ಎಸ್‌ಎಂಜಿಕೆಪಿ02ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25ನೇ ಸಾಲಿನ ಕಾರ್ಯಕ್ರಮವನ್ನು ಶಾಸಕ ಎಸ್.ಎನ್. ಚನ್ನಬಸಪ್ಪ  ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.

ನೆಹರು ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕಣರ ಮತ್ತು ಕ್ರೀಡಾ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ, ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25ನೇ ಸಾಲಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ದಸರಾ ಕ್ರೀಡಾಕೂಟವನ್ನು ಯುವ ಸಬಲೀಕಣರ ಮತ್ತು ಕ್ರೀಡಾ ಇಲಾಖೆಯಿಂದ ಪ್ರತಿ ತಾಲೂಕು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಪ್ರಯತ್ನ ಈ ಕ್ರೀಡಾಕೂಟದಲ್ಲಿ ನಡೆಯುತ್ತದೆ. ಪ್ರತಿಯೊಬ್ಬ ಕ್ರೀಡಾಪಟು ಕೂಡ ಉತ್ತಮವಾದ ಸಾಮರ್ಥ್ಯವನ್ನು ಹೊಂದಿದ್ದು, ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಇದು ಒಂದು ಉತ್ತಮ ಅವಕಾಶವಾಗಿದೆ ಎಂದರು.ವಿಧಾನಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಆತ್ಮವಿಶ್ವಾಸ ಅತ್ಯಂತ ಮುಖ್ಯವಾಗಿದೆ. ಅದು ಕ್ರೀಡೆಯಿಂದ ಸುಲಭವಾಗಿ ದೊರೆಯುತ್ತದೆ. ಕ್ರೀಡಾಪಟುಗಳು ಕ್ರೀಡೆಯಲ್ಲಿ ಎದುರಿಸುವ ಸವಾಲುಗಳನ್ನು ತಮ್ಮ ಜೀವನಲ್ಲಿ ಕೂಡ ಎಂತಹ ಕಷ್ಟಗಳು ಬಂದರೂ ಎದುರಿಸುವ ಸಾಮರ್ಥ್ಯವನ್ನು ಮೈಗೂಡಿಸಿಕೊಂಡಿರುತ್ತಾರೆ. ಕ್ರೀಡಾಪಟುಗಳು ಉತ್ತಮವಾಗಿ ಪ್ರದರ್ಶನ ನೀಡಬೇಕು. ಇಲ್ಲಿ ಸೋಲು ಗೆಲವು ಮುಖ್ಯವಲ್ಲ. ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಅವರು ಮಾತನಾಡಿ, ವಿವಿಧ ತಾಲೂಕು ಕೇಂದ್ರಗಳಲ್ಲಿ 14 ಕ್ರೀಡೆಗಳಲ್ಲಿ ಜಯಗಳಿಸಿ ಇಂದು ನಡೆಯುತ್ತಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಗಮಿಸಿದ ಎಲ್ಲಾ ಕ್ರೀಡಾಪಟುಗಳು ಉತ್ತಮವಾದ ಪ್ರದರ್ಶನವನ್ನು ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಮುಂದಿನ ದಿನಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸುವಂತೆ ನಿಮ್ಮ ಶ್ರಮ ಇರಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್, ವಿವಿಧ ಕ್ರೀಡಾ ಸಂಘ ಸಂಸ್ಥೆಗಳು, ಪದಾಧಿಕಾರಿಗಳು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಂಗಾಳಕ್ಕೆ ದೀದಿ, ತಮಿಳ್ನಾಡಿಗೆ ಅಣ್ಣಾ, ಅಸ್ಸಾಂಗೆ ಮಾಮಾ, ಕೇರಳಕ್ಕೆ ದಾದಾ!
ಬಾಗಲಕೋಟೆ: ಮತ್ತೆ ಚರಂತಿಮಠ, ಮೇಟಿ ಕುಟುಂಬ ಮಧ್ಯೆ ಫೈಟ್‌