ಕನ್ನಡಪ್ರಭ ವಾರ್ತೆ ಬೇಲೂರುಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ, ಯುವ ಘಟಕ ಮತ್ತು ಮಹಿಳಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಮೇ ೨೭ರ ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಡಾ. ಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಮಹೋತ್ಸವವನ್ನು ಪುಷ್ಪಗಿರಿ ಜಗದ್ಗುರು ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯಿತ ಮಹಾಸಭಾ ಘಟಕದ ಅಧ್ಯಕ್ಷ ಎ.ಎಸ್.ಬಸವರಾಜು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೧೨ನೇ ಶತಮಾನದಲ್ಲಿ ಅಡಗಿದ ಅಸಮಾನತೆ, ಶೋಷಣೆ, ಜಾತೀಯತೆಯ ವಿರುದ್ಧ ಅನುಭವ ಮಂಟಪ ಸ್ಥಾಪಿಸಿ ಸರ್ವರಿಗೂ ಸಮಾನತೆ ನೀಡಿದ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಪ್ರತಿ ವರ್ಷದಂತೆ ಈ ಬಾರಿ ಕೂಡ ವೀರಶೈವ ಲಿಂಗಾಯಿತ ಮಹಾಸಭಾದಿಂದ ಆಚರಿಸಲು ನಿರ್ಧಾರಿಸಲಾಗಿದೆ. ಮೇ ೨೭ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ನೆಹರೂ ನಗರದ ವೃತ್ತದಿಂದ ಮೆರವಣಿಗೆಯಲ್ಲಿ ಬಸವೇಶ್ವರ ಭಾವಚಿತ್ರಯೊಂದಿಗೆ ವಿವಿಧ ಜಾನಪದ ತಂಡದೊಂದಿಗೆ ಯಗಚಿ ಸೇತುವೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಬಸವ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಡಾ. ಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪಕ್ಕೆ ತೆರಳಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುತ್ತದೆ ಎಂದರು.ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಎಂ ಬಿದರಿ, ರಾಷ್ಟ್ರೀಯ ಉಪಾಧ್ಯಕ್ಷೆ ಬಿ.ಕೆ.ಚಂದ್ರಕಲಾ, ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ವೀಣಾ ಕಾಶಪ್ಪನವರು, ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ, ರಾಷ್ಟ್ರೀಯ ಸಮಿತಿ ಸದಸ್ಯರಾದ ಗ್ರಾನೈಟ್ ರಾಜಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಹಾಸನ ಜಿಲ್ಲಾಧ್ಯಕ್ಷ ನವಿಲೆ ಪರಮೇಶ್, ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ಪುರಸಭಾ ಅಧ್ಯಕ್ಷ ಎ.ಆರ್. ಅಶೋಕ್, ತಹಸೀಲ್ದಾರ್ ಎಂ. ಮಮತಾ ಇತರರು ಹಾಜರಿರಲಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷರಾದ ಅರಣ್ ಕುಮಾರ್, ಹಾರೋಹಳ್ಳಿ ಜಗದೀಶ್, ಪ್ರಧಾನ ಕಾರ್ಯದರ್ಶಿ ಮದನ್ ಬಳ್ಳೂರು, ಖಜಾಂಚಿ ರಾಜಣ್ಣ, ಯುವ ಘಟಕದ ಅಧ್ಯಕ್ಷ ಚೇತನ್ ಹಳೇಬೀಡು ಹಾಜರಿದ್ದರು.