ಕನ್ನಡಪ್ರಭ ವಾರ್ತೆ ಮದ್ದೂರು
ಸ್ಥಳೀಯರು ಸೇರಿದಂತೆ ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ರಥೋತ್ಸವದ ಅಂಗವಾಗಿ ಮುಂಜಾನೆ ಪ್ರಧಾನ ಅರ್ಚಕ ಪ್ರದೀಪಚಾರ್ಯ ಹಾಗೂ ಸಹ ಅರ್ಚಕ ಸುರೇಶ ಆಚಾರ್ಯ ಅವರುಗಳ ನೇತೃತ್ವದಲ್ಲಿ ಶ್ರೀ ಆಂಜನೇಯ ಸ್ವಾಮಿ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದೊಂದಿಗೆ 108 ಲೀಟರ್ ಕ್ಷೀರಭಿಷೇಕ ನೆರವೇರಿಸಲಾಯಿತು.ನಂತರ ದೇವರಿಗೆ ಪುಷ್ಪಲಂಕಾರ, ಸಂಕಲ್ಪ ಸೇವೆ ಮಹಾಮಂಗಳಾರತಿ ಯೊಂದಿಗೆ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ತರುವಾಯ ಸೀತಾ,ರಾಮ, ಲಕ್ಷ್ಮಣ ಸಮೇತ ಶ್ರೀ ಹನುಮಾನ್ ಉತ್ಸವ ಮೂರ್ತಿಯನ್ನು ಪುಷ್ಪಾಲಂಕೃತ ಸಮೀರ ರಥದಲ್ಲಿ ಪ್ರತಿಷ್ಠಾಪನೆ ಮಾಡುವುದರೊಂದಿಗೆ ದೇಗುಲದ ಪ್ರಾಂಗಣದಲ್ಲಿ ರಥೋತ್ಸವ ನೆರವೇರಿಸಲಾಯಿತು.
------------
12ಕೆಎಂಎನ್ ಡಿ15ಮದ್ದೂರಿನ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀ ಹನುಮದ್ ಜಯಂತಿ ರಥೋತ್ಸವ ನೆರವೇರಿತು.