ನಿವೃತ್ತ ಶಿಕ್ಷಕ ಟಿ.ವೆಂಕಟೇಶ್ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ

KannadaprabhaNewsNetwork |  
Published : Jun 02, 2025, 11:51 PM IST
2ಕೆಎಂಎನ್ ಡಿ13 | Kannada Prabha

ಸಾರಾಂಶ

19 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹುಣಸನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ವೆಂಕಟೇಶ್ ಅವರಿಗೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳಿಂದ ಅದ್ಧೂರಿಯಾಗಿ ಬೀಳ್ಕೊಡುಗೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

19 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹುಣಸನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಟಿ.ವೆಂಕಟೇಶ್ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ ನೀಡಲಾಯಿತು.

ಅಭಿನಂದನೆ ಸ್ವೀಕರಿಸಿದ ಶಿಕ್ಷಕ ಟಿ.ವೆಂಕಟೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ಮುಖ್ಯ ಶಿಕ್ಷಕ ಆರ್.ವಿ.ಧರ್ಮ ರತ್ನಾಕರ ಮಾತನಾಡಿ, ಈ ದಿನ ಶಿಕ್ಷಕ ವೃತ್ತಿಯಿಂದ ನಿವೃತ್ತಿಯಾಗುತ್ತಿರುವ ಟಿ.ವೆಂಕಟೇಶ್ ಅವರು ಮಕ್ಕಳಿಗೆ ಉತ್ತಮ ಕಲಿಕೆ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸಿ ಊರಿನ ಗ್ರಾಮಸ್ಥರು ಹಾಗೂ ಅಕ್ಕಪಕ್ಕ ಗ್ರಾಮಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.

ಇದೇ ವೇಳೆ ಶಿಕ್ಷಕ ಟಿ.ವೆಂಕಟೇಶ್ ಹಾಗೂ ಅನಿತಾ ದಂಪತಿಗೆ ಮೈಸೂರು ಪೇಟ, ಶಾಲು-ಹಾರ ಹಾಕಿ ನೆನಪಿನ ಕಾಣಿಕೆ ನೀಡಿ

ಅಭಿನಂದಿಸಲಾಯಿತು. ಬಿಆರ್‌ಪಿಗಳಾದ ಮಂಜು, ಮೋಹನ್, ಎಸ್‌ಡಿಎಂಸಿ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷ ದೀಪು, ಮುಖಂಡರಾದ ಶಿವಣ್ಣ, ನಿವೃತ್ತ ಪೊಲೀಸ್ ಅಧಿಕಾರಿ ಕಾಳೇಗೌಡ, ಯಜಮಾನರಾದ ಗಂಗಾಧರ, ಪಾಲಾಕ್ಷ, ಎಚ್.ಎನ್.ಮಹೇಶ್, ವಕೀಲ ವೆಂಕಟೇಶ್, ಶಿಕ್ಷಣ ಇಲಾಖೆ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಕೆ.ರಮೇಶ್, ಶಿಕ್ಷಕ ಬಸವಲಿಂಗಪ್ಪ, ಎಂಬಿಬಿಎಸ್ ವಿದ್ಯಾರ್ಥಿನಿ ಇಂಚರ, ಅಂಗನವಾಡಿ ಶಿಕ್ಷಕಿ ಸುಶೀಲ, ರೈತ ಸಂಘದ ಮುಖಂಡರಾದ ಚಿನುಕುರಳಿ ಪುಟ್ಟೇಗೌಡ, ನಾಗೇಶ್, ಕನಗನಮರಡಿ ಧರ್ಮರತ್ನಾಕರ, ನಾಗರಾಜು ಹಾಗೂ ವಿವಿಧ ಶಾಲೆಗಳ ಶಿಕ್ಷಕ ವೃಂದದವರು ಸನ್ಮಾನಿಸಿ ಗೌರವಿಸಿದರು.

ಹೃತೀಕ್ಷಾ ಕುಟುಂಬದವರಿಗೆ ಶ್ರೀ ನಿಶ್ಚಲಾನಂದ ಸ್ವಾಮೀಜಿ ಸಾಂತ್ವನ

ಕನ್ನಡಪ್ರಭ ವಾರ್ತೆ ಮದ್ದೂರು

ಸಂಚಾರಿ ಪೊಲೀಸರ ಎಡವಟ್ಟಿನಿಂದ ಸಾವನ್ನಪ್ಪಿದ ತಾಲೂಕಿನ ಗೊರವನಹಳ್ಳಿಯ ಹೃತೀಕ್ಷಾ ಮನೆಗೆ ಭೇಟಿ ನೀಡಿದ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ನಿಶ್ಚಲಾನಂದನಾಥ ಸ್ವಾಮೀಜಿ ಮಗುವಿನ ಪೋಷಕರಿಗೆ ಸಾಂತ್ವನ ಹೇಳಿದರು.

ಇಂತಹದೊಂದು ದುರ್ಘಟನೆ ನಡೆಯಬಾರದಿತ್ತು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸುವುದು ಅಗತ್ಯವಿದೆ. ಸರ್ಕಾರ ಮಗುವಿನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದರು.

ಇನ್ನೊಂದು ಮಗುವಿನ ವಿದ್ಯಾಭ್ಯಾಸಕ್ಕೆ ನೆರವು ಬೇಕಾದಲ್ಲಿ ಶ್ರೀಮಠಕ್ಕೆ ಬಂದರೆ ಅನುಕೂಲ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ