ಕನ್ನಡಪ್ರಭ ವಾರ್ತೆ ಹಾಸನ
ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕ ಸೇವೆಗಳು ಹಾಗೂ ಆಡಳಿತಾತ್ಮಕ ಕಾರ್ಯಗಳಲ್ಲಿ ಅವರ ಕೊಡುಗೆ ಸ್ಮರಣೀಯವಾಗಿದೆ ಎಂದು ಅಭಿಪ್ರಾಯಪಟ್ಟರು.ನಿಟ್ಟೂರಿನ ವೈದ್ಯಾಧಿಕಾರಿ ಡಾ. ಎಚ್. ಜೆ. ಮಂಜುನಾಥ್ ಮಾತನಾಡಿ, ವಿವಿಧ ಇಲಾಖೆಗಳ ನಡುವೆ ಉತ್ತಮ ಸಮನ್ವಯ ಸಾಧಿಸಿ ಸಾರ್ವಜನಿಕರಿಗೆ ಸೇವೆ ಒದಗಿಸುವಲ್ಲಿ ಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು. ಅವರ ನಿವೃತ್ತಿ ಸಾರ್ವಜನಿಕ ಸೇವೆಯಲ್ಲಿ ಒಂದು ಅಧ್ಯಾಯದ ಅಂತ್ಯವಾದರೂ, ಸಮಾಜದೊಂದಿಗೆ ಅವರ ಬಾಂಧವ್ಯ ಮುಂದುವರಿಯಲಿದೆ ಎಂದು ಹೇಳಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನ್ವೀರ್ ಅಭಿನಂದನಾ ಭಾಷಣ ಮಾಡಿ, ಸರ್ಕಾರಿ ಸೇವೆಯುದ್ದಕ್ಕೂ ನಿಷ್ಠೆ, ಪ್ರಾಮಾಣಿಕತೆ ಮತ್ತು ಕರ್ತವ್ಯಪರತೆಯಿಂದ ಕಾರ್ಯನಿರ್ವಹಿಸಿದ ಕುಮಾರ್ ಅವರು ಯುವ ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ನಿವೃತ್ತಿ ಜೀವನ ಆರೋಗ್ಯ, ನೆಮ್ಮದಿ ಮತ್ತು ಸಂತೋಷದಿಂದ ಕೂಡಿರಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಊರಿನ ಹಿರಿಯ ಮುಖಂಡರು, ಸಾರ್ವಜನಿಕರು, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮ ಪಂಚಾಯಿತಿ ನೌಕರರು, ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಲ್ಲರೂ ಕುಮಾರ್ ಅವರ ಸೇವೆಯನ್ನು ಸ್ಮರಿಸಿ ಶುಭಾಶಯ ಕೋರಿದರು. ವಿಶೇಷವಾಗಿ ಕುಮಾರ್ ಅವರ ತಾಯಿ, ಅಣ್ಣ, ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಸಮೇತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಎಲ್ಲರ ಗಮನ ಸೆಳೆಯಿತು. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕುಮಾರ್ ಅವರನ್ನು ಶಾಲು ಹೊದಿಸಿ, ಫಲಕ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಲವರು ತಮ್ಮ ನೆನಪುಗಳನ್ನು ಹಂಚಿಕೊಂಡು ಭಾವುಕರಾದರು.ಗ್ರಾಮದ ಅಭಿವೃದ್ಧಿ, ಜನಸೇವೆ ಮತ್ತು ಆಡಳಿತದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಮಾರ್ ಅವರ ನಿವೃತ್ತಿ ಕಾರ್ಯಕ್ರಮವು ಸನ್ಮಾನ ಸಮಾರಂಭದ ಜೊತೆಗೆ ಅವರ ಸೇವಾ ಪಯಣವನ್ನು ಗೌರವಿಸುವ ಸ್ಮರಣೀಯ ಕ್ಷಣವಾಗಿ ಮೂಡಿಬಂದಿತು. ಗ್ರಾಮಸ್ಥರು ಹಾಗೂ ಅಧಿಕಾರಿಗಳು ನಿಂತು ಅಭಿನಂದನೆ ಸಲ್ಲಿಸುವ ಮೂಲಕ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ ನೀಡಿದರು.ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕ ಗೌತಮ್ ಅವರು ನಿರೂಪಿಸಿದರು. ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತನ್ವೀರ್ ಸ್ವಾಗತಿಸಿ ಆಗಮಿಸಿದ ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಬರಮಾಡಿಕೊಂಡರು.