ಗೀತಾಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Mar 21, 2024, 01:03 AM IST
ಪೋಟೋ: 20ಎಸ್‌ಎಂಜಿಕೆಪಿ04ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಅವರ ಪ್ರಚಾರಕ್ಕೆ ಸಾಥ್‌ ನೀಡಿದ ನಟ ಶಿವರಾಜ್‌ಕುಮಾರ್‌. | Kannada Prabha

ಸಾರಾಂಶ

ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ ಕೋರಲಾಯಿತು. ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಭದ್ರಾವತಿವರೆಗೂ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಭರ್ಜರಿ ಪ್ರಚಾರ ನಡೆಸಿದ ಗೀತಾ ಅವರಿಗೆ ಪತಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್‌, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಾಥ್‌ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಅದ್ಧೂರಿ ಸ್ವಾಗತ ಕೋರಲಾಯಿತು.

ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಭದ್ರಾವತಿವರೆಗೂ ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ಭರ್ಜರಿ ಪ್ರಚಾರ ನಡೆಸಿದ ಗೀತಾ ಅವರಿಗೆ ಪತಿ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್‌, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಾಥ್‌ ನೀಡಿದರು.

ತೆರೆದ ವಾಹನದಲ್ಲಿ ಗೀತಾ ಅವರ ಮೆರವಣಿಗೆ ನಡೆಸಲಾಯಿತು. ಕಾರೇಹಳ್ಳಿಯಿಂದ ಭದ್ರಾವತಿವರೆಗೂ ಸುಮಾರು 5 ಕಿ.ಮೀ. ಬೃಹತ್ ಬೈಕ್ ರ್ಯಾಲಿ ನಡೆಯಿತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು.

ಶಿವಮೊಗ್ಗದಲ್ಲೂ ಅದ್ಧೂರಿ ಸ್ವಾಗತ:

ಅಭ್ಯರ್ಥಿ ಗೀತಾ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದಂತೆ ಶಿವಮೊಗ್ಗದ ಎಂಆರ್‌ಎಸ್‌ ವೃತ್ತದಿಂದ ಕಾರ್ಯಕರ್ತರಿಂದ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು. ಕಾರ್ಯಕರ್ತರು ಬೆಕ್ಕಿನ ಕಲ್ಮಠ ಬಳಿ ಬೃಹತ್ ಮೂಸಂಬಿ ಫಲದ ಹಾರ ಹಾಕಿದರು, ಅಭಿಮಾನ ಮೆರೆದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಎಂಆರ್‌ಎಸ್ ವೃತ್ತದಿಂದ ಲಗನಾ ಕಲ್ಯಾಣ ಮಂದಿರವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

- - -

-20ಎಸ್‌ಎಂಜಿಕೆಪಿ05:

ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್‌ ಘೋಷಣೆ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರಿಗೆ ಬುಧವಾರ ಜಿಲ್ಲಾ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ ಕೋರಲಾಯಿತು.

- - -

-20ಎಸ್‌ಎಂಜಿಕೆಪಿ06:

ಶಿವಮೊಗ್ಗ ಕ್ಷೇತ್ರ ಬುಧವಾರ ಆಗಮಿಸಿದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಅವರನ್ನು ಬೈಕ್‌ ರ್ಯಾಲಿ ಮೂಲಕ ಕರೆತರಲಾಯಿತು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ