-ಶಿವಮೊಗ್ಗ ಪೂರ್ವ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ । ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಜನತೆ ಸಂಭ್ರಮದಿಂದ ಆಚರಿಸಿದರು.ಜನರು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದರು. ಎಲ್ಲೆಡೆ ಹೊಸ ವರ್ಷ ಆಚರಣೆಯ ಮೆರುಗು ಹೆಚ್ಚಿಸಿತ್ತು.
ಹೊಸವರ್ಷದ ಹಿನ್ನೆಲೆಯಲ್ಲಿ ನಗರದ ಬೇಕರಿಗಳು ಹಾಗೂ ಮದ್ಯ ಅಂಗಡಿಗಳಲ್ಲಿ ಎಂದಿಗಿಂತ ವ್ಯಾಪಾರ ಹೆಚ್ಚಾಗಿ ನಡೆದಿತ್ತು. ಬೇಕರಿಗಳಲ್ಲಿ ಕೇಕ್ ಹಾಗೂ ವಿವಿಧ ಬಗೆಯ ಸಿಹಿ ತಿನಿಸುಗಳ ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು.
ಬಿ.ಎಚ್. ರಸ್ತೆ, ನೆಹರೂ ರಸ್ತೆ, ಅಮೀರ್ ಅಹಮದ್ ವೃತ್ತ, ಅಶೋಕ ಪಿಲ್ಲರ್, ದುರ್ಗಿಗುಡಿ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್, ಎನ್‍ಇಎಸ್ ಸರ್ಕಲ್, ಸಾಗರ ರಸ್ತೆ, ಗೋಪಾಳ ಮುಖ್ಯರಸ್ತೆ, ದ್ವಿಚಕ್ರ ವಾಹನ ಸವಾರರಿಂದ ತುಂಬಿ ತುಳುಕಿದವು.
ಹೊಸ ಆಲೋಚನೆಗಳೊಂದಿಗೆ ಉತ್ತಮ ಬದುಕು
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಹೊಸ ವರ್ಷ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 2024ರಲ್ಲಿ ಕಲಿತ ಜೀವನ ಪಾಠಗಳನ್ನು ಅಳವಡಿಸಿಕೊಂಡು ಈ ವರ್ಷ ಮತ್ತಷ್ಟು ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಸದಸ್ಯ ಸದಸ್ಯೆಯರು ಫ್ಯಾಷನ್ ಶೋ ಹಾಗೂ ನೃತ್ಯ ಸ್ಪರ್ಧೆ ನಡೆಸುವುದರ ಜತೆಗೆ ಸಿಡಿಮದ್ದು ಸಿಡಿಸಿ ಸಂಭ್ರಮ ಆಚರಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ವಿವಿಧ ಮನರಂಜನೆ ಆಟಗಳ ಜತೆಗೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಿದರು.
------------------------------
.....ಬಾಕ್ಸ್...ಕೇಕ್ ಕತ್ತರಿಸಿ ಶುಭ ಹಾರೈಕೆಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ಬಂದೋಬಸ್ತ್ ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್ ಹೊಸವರ್ಷದ ಅಂಗವಾಗಿ ಕೇಕ್ ಕತ್ತರಿಸಿ ಪೊಲೀಸ್ ಅಧಿಕಾರಿಗಳಿಗೆ ತಿನ್ನಿಸಿ ಶುಭ ಹಾರೈಸಿದರು.
ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‍ಕುಮಾರ್ ಭೂಮ್‍ರೆಡ್ಡಿ, ಕಾರ್ಯಪ್ಪ, ಡಿವೈಎಸ್‍ಪಿ ಸುರೇಶ್, ಇನ್ಸ್‌ಪೆಕ್ಟರ್ ಗುರುರಾಜ್, ಪಾಟೀಲ್, ಹರೀಶ್ ಪಾಟೀಲ್, ಟ್ರಾಫಿಕ್ ಇನ್ಸ್‌ಪೆಕ್ಟರ್ ಸಂತೋಷ್, ವಿನೋಬನಗರ ಠಾಣಾ ಇನ್ಸ್‌ಪೆಕ್ಟರ್ ಚಂದ್ರಕಲಾ ಸೇರಿದಂತೆ ಶಿವಮೊಗ್ಗ ಪೊಲೀಸ್ ಉಪವಿಭಾಗದ ಸಿಬ್ಬಂದಿ ಮತ್ತು ಅಧಿಕಾರಿಗಳು ಹೊಸವರ್ಷದ ಸಂಭ್ರಮದಲ್ಲಿ ಭಾಗವಹಿಸಿದ್ದರು.--------------------
....ಬಾಕ್ಸ್...ಹೊಸ ವರ್ಷಾಚಾರಣೆಯಂದೇ ಅಪಘಾತ
ಶಿವಮೊಗ್ಗ: ನಗರದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ, ಯುವಕ ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.ಸಿದ್ದಯ್ಯ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗೋಪಾಳದ ನಿವಾಸಿ ಧನುಷ್ (20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಪ್ರಜ್ವಲ್ (21) ಗಾಯಗೊಂಡ ಯುವಕನಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಆದರೆ, ಕಾರಿನಲ್ಲಿದ್ದವರು ಅನಾಹುತದಿಂದ ಪಾರಾಗಿದ್ಧಾರೆ. ಇವರು ಸಾಗರ ರಸ್ತೆಯ ಪೋಲೀಸ್ ಲೇಔಟ್ ಸಮೀಪದ ನಿವಾಸಿಗಳೆಂದು ಹೇಳಲಾಗಿದೆ.ತಡರಾತ್ರಿಯೇ ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೋಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಪಶ್ಚಿಮ ಸಂಚಾರಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯ ಕುರಿತಂತೆ ಇನ್ನಷ್ಟೆ ಟ್ರಾಫಿಕ್ ಠಾಣೆಯಲ್ಲಿ ದೂರು ದಾಖಲಾಗಬೇಕಾಗಿದೆ.
ಇನ್ನೊಂದು ಘಟನೆಯಲ್ಲಿ:ನಗರದ ರಾಯಲ್ ಆರ್ಕಿಡ್ ಹೋಟೆಲ್ ಸಮೀಪ ಬುಧವಾರ ಬೆಳಗ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆ ಮೃತಪಟ್ಟಿದ್ದಾರೆ.
ರೇಣುಕಮ್ಮ (70) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಬೇಕಾಗಿದೆ.
---------------------------ಪೋಟೋ: 1ಎಸ್‌ಎಂಜಿಕೆಪಿ07
ಶಿವಮೊಗ್ಗ ನಗರದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಹೊಸವರ್ಷ ಆಚರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.------------------------
ಪೋಟೋ: 1ಎಸ್‌ಎಂಜಿಕೆಪಿ08ಶಿವಮೊಗ್ಗ : ನಗರದ ಅಮೀರ್ ಅಹಮ್ಮದ್ ವೃತ್ತದಲ್ಲಿ ಹೊಸ ವರ್ಷಾಚರಣೆ ಹಿನ್ನಲೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್ ಹೊಸವರ್ಷದ ಅಂಗವಾಗಿ ಕೇಕ್ ಕತ್ತರಿಸಿದರು.
---------------------------------ಪೋಟೋ: 1ಎಸ್‌ಎಂಜಿಕೆಪಿ09
ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯಲ್ಲಿ ನಡೆದ ಕಾರು ಅಪಘಾತದ ದೃಶ್ಯ.