ಶಾಸಕರಿಗೆ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುಕರ್ನಾಟಕ ಸರ್ಕಾರದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪಟ್ಟಣಕ್ಕೆ ಆಗಮಿಸಿದ ಶಾಸಕ ಟಿ.ಡಿ.ರಾಜೇಗೌಡರನ್ನು ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಜೇಸಿ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಬರ ಮಾಡಿಕೊಂಡರು.ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜೇಗೌಡ ಮಾತನಾಡಿ, ಕ್ಷೇತ್ರದ ಮತದಾರರ ಆಶೀರ್ವಾದ ಹಾಗೂ ಪಕ್ಷದ ನಾಯಕರ ಸಹಕಾರದಿಂದ ಬಹುದೊಡ್ಡ ಜವಾಬ್ದಾರಿ ನನ್ನ ಹೆಗಲ ಮೇಲೇರಿದೆ. ರಾಜ್ಯ ಸರ್ಕಾರ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾರ್ಗದರ್ಶನದಂತೆ ನಿಗಮ ಮುನ್ನಡೆಸಲಿದ್ದು, ರೈತರು, ಜನ ಸಾಮಾನ್ಯರಿಗೆ ಪೂರಕ ಕಾರ್ಯಕ್ರಮ ರೂಪಿಸಲಾಗುವುದು.ನಿಗಮದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಲಿದ್ದು, ಪ್ರಮುಖವಾಗಿ ವಿದ್ಯುತ್ ಬೇಡಿಕೆಗೆ ಅನುಗುಣವಾಗಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಗುವುದು. ರೈತ ಸ್ನೇಹಿ, ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ. ನಿಗಮದ ಅನುದಾನಗಳನ್ನು ಸಮರ್ಪಕವಾಗಿ ಬಳಸಲಾಗುವುದು ಎಂದರು.ರಾಜೇಗೌಡ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿದರು. ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಎಂಎಡಿಬಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ರಾಪಂ ಅಧ್ಯಕ್ಷ ಸದಾಶಿವ ಆಚಾರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಎಂ.ನಟರಾಜ್, ಮುಖಂಡರಾದ ಎಂ.ಎಸ್.ಜಯಪ್ರಕಾಶ್, ಎಂ.ಎಸ್.ಅರುಣೇಶ್, ಹೇಮಲತಾ, ಶಶಿಕಲಾ, ಇಬ್ರಾಹಿಂ ಶಾಫಿ, ಹಿರಿಯಣ್ಣ, ಟಿ.ಎಂ.ವೆಂಕಟೇಶ್, ಮಹಮ್ಮದ್ ಜುಹೇಬ್, ಎಂ.ಆರ್.ರವಿಗೌಡ, ರವಿಚಂದ್ರ, ಜಾನಕಿ, ಸರಿತಾ, ಇಸ್ಮಾಯಿಲ್, ಸುಧಾಕರ್ ಮತ್ತಿತರರು ಹಾಜರಿದ್ದರು.೦೨ಬಿಹೆಚ್‌ಆರ್ ೫:ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಳಿಕ ಬಾಳೆಹೊನ್ನೂರು ಪಟ್ಟಣಕ್ಕೆ ಆಗಮಿಸಿದ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿ ಸ್ವಾಗತಿಸಿದರು. ಬಿ.ಸಿ.ಗೀತಾ, ಮಹಮ್ಮದ್ ಹನೀಫ್, ಸದಾಶಿವ, ಹಿರಿಯಣ್ಣ, ಜಯಪ್ರಕಾಶ್, ಅರುಣೇಶ್, ಹೇಮಲತಾ, ಶಶಿಕಲಾ ಇದ್ದರು.