ಕನ್ನಡಪ್ರಭ ವಾರ್ತೆ ಮದ್ದೂರು
ಮೇಘಾಲಯದ ರಾಜ್ಯಪಾಲರಾದ ನಂತರ ಪ್ರಥಮ ಬಾರಿಗೆ ಮದ್ದೂರಿಗೆ ಆಗಮಿಸಿದ್ದ ಸಿ.ಎಚ್. ವಿಜಯಶಂಕರ್ ಅವರಿಗೆ ಬಿಜೆಪಿ ಮುಖಂಡರು ಸಾಂಪ್ರದಾಯಕವಾಗಿ ಸ್ವಾಗತ ನೀಡಿದರು.ಬೆಂಗಳೂರಿನಿಂದ ಮಂಡ್ಯ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ಪಕ್ಷದ ನಾಯಕರ ಆಹ್ವಾನದ ಮೇರೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಮೇಘಾಲಯ ರಾಜ್ಯಪಾಲ ವಿಜಯಶಂಕರ್ ಅವರಿಗೆ ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಸಿ.ಕೆ.ಸತೀಶ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಮುಖಂಡರು ಹೂಗುಚ್ಚ ನೀಡಿ ಬರಮಾಡಿಕೊಂಡರು.
ನಂತರ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಉಭಯ ಕುಶಲೋಪರಿ ನಡೆಸಿದ ವಿಜಯಶಂಕರ್ ಮುಖಂಡರೊಂದಿಗೆ ಸೇರಿ ಭೋಜನ ಸ್ವೀಕರಿಸಿದರು. ಇದೇ ವೇಳೆ ರಾಜ್ಯಪಾಲ ವಿಜಯಶಂಕರ್ ಅವರಿಗೆ ಜಿಲ್ಲಾ ಸಶಸ್ತ್ರ ಪೊಲೀಸ್ ತಂಡದಿಂದ ಗೌರವವಂದನೆ ಸಲ್ಲಿಸಲಾಯಿತು.ಈ ವೇಳೆ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಕೆ.ಎಸ್. ಸೋಮಶೇಖರ್, ವೃತ್ತ ನಿರೀಕ್ಷಕ ಶಿವಕುಮಾರ್, ಮುಖಂಡರಾದ ಎಂ.ಸಿ.ಸಿದ್ದು, ಮಲ್ಲಿಕಾರ್ಜುನ್, ಡಾ.ರವೀಂದ್ರ, ಶ್ವೇತಾ ಅಶೋಕ್, ಗುರು ಮಲ್ಲೇಶ್, ಉಮೇಶ್ ಸೇರಿದಂತೆ ಹಲವು ಮುಖಂಡರು ಇದ್ದರು.ರೈತರು, ಕೃಷಿ ಸಮಸ್ಯೆಗಳ ಬಗ್ಗೆ ಗಮನಸೆಳೆಯುವೆ: ಮಂಜುನಾಥ್
ಕನ್ನಡಪ್ರಭ ವಾರ್ತೆ ಮಂಡ್ಯಕೃಷಿ ಹಾಗೂ ರೈತರ ಸಮಸ್ಯೆಗಳು ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲಹೆ ನೀಡಿ ಸರಿಪಡಿಸುವಂತಹ ಗುರುತರ ಕೆಲಸವನ್ನು ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಪರಿಣಾಮಕಾರಿಯಾಗಿ ಮಾಡುತ್ತದೆ ಎಂದು ಅಧ್ಯಕ್ಷ ಎಸ್.ಆರ್.ಮಂಜುನಾಥಗೌಡ ತಿಳಿಸಿದರು.ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದಾಗಿ ತಿಳಿಸಿದರು.ಬೆಂಗಳೂರಿನಲ್ಲಿರುವ ಕೃಷಿಕ ಸಮಾಜದ ಕಟ್ಟಡ ಹಲವು ಸಮಸ್ಯೆಗಳಿಂದ ಕೂಡಿದ್ದು, ಅದನ್ನು ಸರಿಪಡಿಸುವ ಹಂತದಲ್ಲಿ ಹೆಜ್ಜೆ ಇರಿಸಿದ್ದೇವೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲಿರುವ ಕೃಷಿಕ ಸಮಾಜದ ಕಟ್ಟಡವೂ ಸಹ ಜಿಲ್ಲಾಧಿಕಾರಿ ಸುಪರ್ದಿಯಲ್ಲಿದ್ದು, ಅದನ್ನು ಕೃಷಿಕ ಸಮಾಜದ ಆಸ್ತಿಯನ್ನಾಗಿ ಪರಿವರ್ತನೆ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ಮುಖಂಡರಾದ ಈಶ್ವರಪ್ರಸಾದ್, ವೆಂಕಟೇಶ್, ನಾಗರಾಜು, ವಿಶ್ವಾಸ್ ಗೋಷ್ಠಿಯಲ್ಲಿದ್ದರು.