ಶೌರ್ಯ ಜಾಗರಣ ರಥಯಾತ್ರೆಗೆ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Oct 03, 2023, 06:05 PM IST
ದೊಡ್ಡಬಳ್ಳಾಪುರಕ್ಕೆ ಆಗಮಿಸಿದ್ದ ಶೌರ್ಯ ಜಾಗರಣ ರಥಯಾತ್ರೆ. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಹಿಂದೂ ಸಮಾಜದಲ್ಲಿನ ಭವ್ಯ ಶೌರ್ಯ ಪರಂಪರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮೂಲಕ ಹಿಂದೂ ಸಮಾಜದ ಏಳಿಗೆಗಾಗಿ ಶ್ರಮಿಸಿದವರನ್ನು ಸ್ಮರಿಸುವ ಸಲುವಾಗಿ ಚಿತ್ರದುರ್ಗದಿಂದ ಪ್ರಾರಂಭವಾಗಿರುವ ಶೌರ್ಯ ಜಾಗರಣ ರಥಯಾತ್ರೆಗೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ದೊಡ್ಡಬಳ್ಳಾಪುರ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಹಿಂದೂ ಸಮಾಜದಲ್ಲಿನ ಭವ್ಯ ಶೌರ್ಯ ಪರಂಪರೆಯನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮೂಲಕ ಹಿಂದೂ ಸಮಾಜದ ಏಳಿಗೆಗಾಗಿ ಶ್ರಮಿಸಿದವರನ್ನು ಸ್ಮರಿಸುವ ಸಲುವಾಗಿ ಚಿತ್ರದುರ್ಗದಿಂದ ಪ್ರಾರಂಭವಾಗಿರುವ ಶೌರ್ಯ ಜಾಗರಣ ರಥಯಾತ್ರೆಗೆ ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬಯಲು ಬಸವಣ್ಣ ದೇವಾಲಯದಿಂದ ಪ್ರಾರಂಭವಾದ ರಥಯಾತ್ರೆ ಹಾಗೂ ಶೋಭಾಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ನಾಗರಿಕರು ರಥಕ್ಕೆ ಹೂ ಸಮರ್ಪಿಸಿ ಸ್ವಾಗತಿಸಿದರು. ಭಜರಂಗಿ, ಶಿವ ಮೊದಲಾದ ದೇವತಾ ಮೂರ್ತಿಗಳ ಸ್ಥಬ್ಧ ಚಿತ್ರಗಳು, ವಾದ್ಯಗೋಷ್ಠಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ನಗರದ ಇಸ್ಲಾಂಪುರದಲ್ಲಿ ಮುಸ್ಲಿಂ ಬಾಂಧವರು ರಥವನ್ನು ಸ್ವಾಗತಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಾಗೂ ಸಾರ್ವಜನಿಕರಿಗೆ ತಂಪು ಪಾನೀಯ ಹಾಗೂ ನೀರಿನ ಬಾಟೆಲ್‌ಗಳನ್ನು ವಿತರಿಸುವ ಮೂಲಕ ಸೌಹಾರ್ದತೆ ಸಂದೇಶ ಸಾರಿದರು. ಬಜರಂಗದಳ ಸ್ಥಾಪನೆಯಾಗಿ 60 ವರ್ಷಗಳನ್ನು ಪೂರೈಸಿರುವ ಈ ಸಂದರ್ಭದಲ್ಲಿ ನಡೆಯುತ್ತಿರುವ ಐತಿಹಾಸಿಕ ರಥಯಾತ್ರೆಯು 90ರ ದಶಕದಲ್ಲಿ ನಡೆದ ರಾಮಮಂದಿರ ರಥಯಾತ್ರೆಯಷ್ಟೇ ಪ್ರಮುಖವಾಗಿದೆ. ಚಿತ್ರದುರ್ಗದಲ್ಲಿ ಸೆ.25ರಂದು ಆರಂಭವಾಗಿರುವ ರಥಯಾತ್ರೆ ಅ.10ರಂದು ಉಡುಪಿಯಲ್ಲಿ ಸಮಾರೋಪಗೊಳ್ಳಲಿದೆ ಎಂದು ಬಜರಂಗದಳ ಮುಖಂಡರು ತಿಳಿಸಿದರು. 2ಕೆಡಿಬಿಪಿ9- ದೊಡ್ಡಬಳ್ಳಾಪುರಕ್ಕೆ ಆಗಮಿಸಿದ್ದ ಶೌರ್ಯ ಜಾಗರಣ ರಥಯಾತ್ರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ
ವಿರೋಧದ ನಡುವೆ ಮದುವೆ : ಸಿಟ್ಟಲ್ಲಿ ಅಳಿಯನ ಮನೆಗೆ ಮಾವನಿಂದ ಬೆಂಕಿ!