ಕೆರೂರ: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ನಾಮಫಲಕ ಹೊತ್ತ ರಥಯಾತ್ರೆ ಗುರುವಾರ ರಾತ್ರಿ ಕೆರೂರ ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪುಷ್ಪವೃಷ್ಟಿಗೈದು ಬರಮಾಡಿಕೊಂಡರು.
ಕನ್ನಡಪ್ರಭ ವಾರ್ತೆ ಕೆರೂರ
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ನಾಮಫಲಕ ಹೊತ್ತ ರಥಯಾತ್ರೆ ಗುರುವಾರ ರಾತ್ರಿ ಕೆರೂರ ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪುಷ್ಪವೃಷ್ಟಿಗೈದು ಬರಮಾಡಿಕೊಂಡರು. ಕೆರೂರ ಸಮೀಪದ ಹೊಸಕೋಟೆ ಗ್ರಾಮದ ಶ್ರೀ ಮಾರುತೇಶ್ವರ ಪ.ಪಂ.ಸಾಂಸ್ಕೃತಿಕ ಕಲಾ ಅಭಿವೃದ್ಧಿ ಸಂಘದವರು ಸಂಘದ ಅಧ್ಯಕ್ಷ ಗೋಪಾಲ ನಾಯ್ಕ ನೇತೃತ್ವದಲ್ಲಿ ಭುವನೇಶ್ವರಿ ಮಾತೆಗೆ ಪುಷ್ಪ ಅರ್ಪಿಸಿ ಕನ್ನಡ ಪರ ಘೋಷಣೆ ಕೂಗಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಡೊಳ್ಳು ಕುಣಿತ ಕನ್ನಡದ ಭಕ್ತಿ ಗೀತೆಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.