ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಭವ್ಯ ಸ್ವಾಗತ

KannadaprabhaNewsNetwork |  
Published : Dec 15, 2024, 02:04 AM IST
14ಕೆಎಂಎನ್ ಡಿ25 | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಗಮಂಗಲದಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಂಡ್ಯ ನಗರದಲ್ಲಿ ನಡೆಯಲಿರುವ ಅಕ್ಷರ ಜಾತ್ರೆಯಲ್ಲಿ ತಾಲೂಕಿನ ಜನತೆ ಸೇರಿದಂತೆ ಯುವಜನರು ಹಾಗೂ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಗಮಂಗಲದಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ಶಾಸಕ ಎಚ್.ಟಿ.ಮಂಜು ಪ್ರಚಾರ ರಥಕ್ಕೆ ಚಾಲನೆ ನೀಡಿದರು. ನಂತರ ಪಟ್ಟಣದ ಸಾಹಿತ್ಯಪ್ರೇಮಿಗಳು, ಕನ್ನಡಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಭುವನೇಶ್ವರಿಯ ಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.

ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್, ಪುರಸಭೆ ಸದಸ್ಯರಾದ ಡಿ.ಪ್ರೇಮಕುಮಾರ್, ಗಿರೀಶ್‌ಕುಮಾರ್, ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ಮಾಜಿ ಕಾರ್ಯಾಧ್ಯಕ್ಷ ಬಳ್ಳೇಕೆರೆ ಮಂಜುನಾಥ್, ಕಾರ್ಯದರ್ಶಿ ಕಟ್ಟೆಮಹೇಶ್ ಮತ್ತಿತರರು ಉಪಸ್ಥಿತರಿದ್ದು ಮಂಡ್ಯದ ಸಮ್ಮೇಳನಕ್ಕೆ ಸಾರ್ವಜನಿಕರು, ಹಾಗೂ ವಿದ್ಯಾರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

ಈ ವೇಳೆ ಶಾಸಕ ಎಚ್.ಟಿ.ಮಂಜು ಮಾತನಾಡಿ, ಮಂಡ್ಯ ನಗರದಲ್ಲಿ ನಡೆಯಲಿರುವ ಅಕ್ಷರ ಜಾತ್ರೆಯಲ್ಲಿ ತಾಲೂಕಿನ ಜನತೆ ಸೇರಿದಂತೆ ಯುವಜನರು ಹಾಗೂ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಇದೇ ವೇಳೆ ಕನ್ನಡದ ವರನಟ ಡಾ.ರಾಜಕುಮಾರ್ ಹಾಡಿರುವ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಚಿತ್ರ ಗೀತೆಗೆ ಪುರಸಭೆ ಸದಸ್ಯ ಪ್ರೇಮಕುಮಾರ್, ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿ ನೃತ್ಯ ಮಾಡಿದರು. ಕಸಾಪ ಉಪಾಧ್ಯಕ್ಷೆ ಸವಿತಾ ರಮೇಶ್, ಪದಾಧಿಕಾರಿಗಳಾದ ಕಟ್ಟೆ ಮಹೇಶ್, ಪಿ.ಬಿ.ನಾಗರಾಜು, ಪುರಸಭೆ ಸದಸ್ಯ ಗಿರೀಶ್, ನಾಟನಹಳ್ಳಿ ಗಂಗಾಧರ, ಬಳ್ಳೇಕೆರೆ ಮಂಜುನಾಥ್, ಎಂ.ಕೆ.ಹರಿಚರಣತಿಲಕ್, ಕೆ.ಆರ್.ನೀಲಕಂಠ, ಸೈಯ್ಯದ್ ಖಲೀಲ್, ಅಮಿನಾಬಾನು ಸೇರಿದಂತೆ ಕೆಪಿಎಸ್ ಹಾಗೂ ಆದಿಚುಂಚನಗಿರಿ ಶಾಲೆ ಸಾವಿರಾರು ಮಕ್ಕಳು ಕನ್ನಡ ರಥದ ಮೆರವಣಿಗೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌