ಹಿರಿಯರ ಸ್ಮರಿಸುವ ಕಾರ್ಯ ಶ್ರೇಷ್ಠವಾದದ್ದು: ಸಂಸದ ಕೋಟ

KannadaprabhaNewsNetwork | Published : Feb 28, 2025 12:47 AM

ಸಾರಾಂಶ

ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ತಂಗುದಾಣವನ್ನುಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಕೋಟ

ಇಲ್ಲಿನ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ತಂಗುದಾಣವನ್ನುಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.ನಂತರ ಮಾತನಾಡಿದ ಅವರು, ನಮ್ಮ ಹಿರಿಯರ ಜೀವನ, ಅವರ ಆದರ್ಶ, ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಅವರು ಹೆಸರು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿಹೇಳುವ ಕಾರ್ಯ ಶ್ರೇಷ್ಟ ಮತ್ತು ಸಾರ್ಥಕವಾದುದು. ವಾಸುದೇವ ನಾಯಕ್ ಎಂದರೆ ನನಗೆ ಆ ಕಾಲದಲ್ಲಿ ಅನ್ನ ಅರಿವೆ, ಆಸರೆ ನೀಡಿದ ಮಹಾಶಕ್ತಿ ಶಾಶ್ವತವಾಗಿ ನೆನಪುಳಿಯುವಂತ ವ್ಯಕ್ತಿಯಾಗಿದ್ದಾರೆ. ಕಷ್ಟದಲ್ಲಿರುವರಿಗೆ ನೆರವು ನೀಡಿದ ಅವರು ಮಸ್ತಕದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ. ಅಂಥವರ ಹೆಸರನ್ನು ಉಳಿಸುವ ಪಂಚವರ್ಣ ಸಂಘಟನೆ ಸಮಾಜಮುಖಿ ಕಾರ್ಯಚಟುವಟಿಕೆಗಳು ಇನ್ನಷ್ಟು ಗಟ್ಟಿಗೊಳಿಸುವಂತೆ ಮಾಡಿದೆ ಎಂದು ಅಭಿಪ್ರಾಯಪಟ್ಟರು.ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಕುಂದರ್ ದೀಪ ಬೆಳಗಿಸಿದರು. ಕೋಟ ಅಮೃತೇಶ್ವರಿದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್, ತಂಗುದಾಣ ಸಮೀಪ ಗಿಡ ನೆಟ್ಟು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಸುದೇವ ನಾಯಕ್ ಪುತ್ರ ರಾಘವ ನಾಯಕ್ ವಹಿಸಿದ್ದರು.ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ವಾಸುದೇವ ನಾಯಕ್ ಪುತ್ರ ರಘುರಾಮ್ ನಾಯಕ್, ವತ್ಸಲ ರಾಧಕೃಷ್ಣ ನಾಯಕ್, ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಜಿಎಸ್‌ಬಿ ಮುಖಂಡರಾದ ರಮೇಶ್ ಪಡಿಯಾರ್, ಶ್ರೀಕಾಂತ್ ಶೆಣೈ, ಕೋಟ ಗ್ರಾಪಂ ಸದಸ್ಯರಾದ ಅಜಿತ್ ದೇವಾಡಿಗ, ಸಂತೋಷ್ ಪ್ರಭು, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸದಾನಂದ ಪೂಜಾರಿ, ಭಗತ್ ಸಿಂಗ್ ಯುವ ವೇದಿಕೆ ಅಧ್ಯಕ್ಷ ಪ್ರಸಾದ್ ಬಿಲ್ಲವ, ಪಂಚವರ್ಣದ ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಉಪಸ್ಥಿತರಿದ್ದರು.ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

Share this article