ದೀನ ದಲಿತ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ: ಡಿಸಿ ಮೀನಾ

KannadaprabhaNewsNetwork |  
Published : Apr 06, 2024, 12:49 AM IST
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್‌ರವರ 117 ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಡಿಸಿ ಮೀನಾ ನಾಗರಾಜ್‌ ಅವರು ಪುಷ್ಪ ಅರ್ಚನೆ ಮಾಡಿದರು. ಜಿಪಂ ಸಿಇಓ ಡಾ. ಗೋಪಾಲಕೃಷ್ಣ, ಎಎಸ್ಪಿ ಕೃಷ್ಣಮೂರ್ತಿ ಇದ್ದರು. | Kannada Prabha

ಸಾರಾಂಶ

ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಾಬು ಜಗಜೀವನ್‌ ರಾಮ್ ದೀನ ದಲಿತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು

ಡಾ. ಬಾಬು ಜಗಜೀವನ್‌ರವರ 117 ನೇ ಜನ್ಮದಿನಾಚರಣೆಯಲ್ಲಿ ಅಭಿಮತ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಾಬು ಜಗಜೀವನ್‌ ರಾಮ್ ದೀನ ದಲಿತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್‌ರವರ 117 ನೇ ಜನ್ಮದಿನಾಚರಣೆಯನ್ನು ಸರಳವಾಗಿ ಆಚರಿಸುವ ಮೂಲಕ ನಾಗರಿಕರಿಗೆ ಶುಭಾಶಯ ಕೋರಿದರು. ದೀನ ದಲಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಸರಳ ಸಜ್ಜನ ವ್ಯಕ್ತಿಯಾಗಿದ್ದ ಡಾ. ಬಾಬು ಜಗಜೀವನ್‌ ರಾಮ್‌ ಜನ್ಮ ದಿನಾಚರಣೆ ಯನ್ನು ಸ್ಮರಿಸಿದರು. ಇದೇ ಸಂದರ್ಭದಲ್ಲಿ ಚುನಾವಣೆ ಪ್ರಚಾರ ಐಕಾನ್‌ಗಳಾಗಿ ಹಿರೇಮಗಳೂರು ಕಣ್ಣನ್, ರಕ್ಷಿತರಾಜು ಸೇರಿ ಮತ್ತಿಬ್ಬರ ಆಯ್ಕೆ ಮಾಡಿದ ಸಮಾಜ ಎಲ್ಲಾ ಸ್ಥರದ ಜನರು ಮತದಾನ ಮಾಡಲು ಜಾಗೃತಿ ಮೂಡಿಸಲು ಉದ್ದೇಶ ಹೊಂದಿದ್ದು, ನಗರದಲ್ಲಿ ಶೇಕಡ 70 ರಷ್ಟು ಮತದಾನವಾಗಬೇಕೆಂದು ಗುರಿ ಹೊಂದಲಾಗಿದೆ ಎಂದರು. ಸಮಾಜದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸ್ವೀಪ್‌ ಮತದಾನ ಜಾಗೃತಿ ’ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮವನ್ನು ಬಹಳ ಪರಿಣಾಮಕಾರಿಯಾಗಿ ಮಾಡಲಾಗುವುದೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಕೃಷ್ಣಮೂರ್ತಿ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. 5 ಕೆಸಿಕೆಎಂ 1ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಡಾ. ಬಾಬು ಜಗಜೀವನ್‌ರವರ 117 ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಡಿಸಿ ಮೀನಾ ನಾಗರಾಜ್‌ ಅವರು ಪುಷ್ಪ ಅರ್ಚನೆ ಮಾಡಿದರು. ಜಿಪಂ ಸಿಇಓ ಡಾ. ಗೋಪಾಲಕೃಷ್ಣ, ಎಎಸ್ಪಿ ಕೃಷ್ಣಮೂರ್ತಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ