ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ಹಡಪದ ಓಣಿಯಲ್ಲಿ ತಾಲೂಕು ಆಡಳಿತ ಹಾಗೂ ಸಮುದಾಯದ ವತಿಯಿಂದ ಗುರುವಾರ ನಡೆದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಘಟಕದ ಸಂಗಪ್ಪ ತಡವಲ, ಕಂದಾಯ ಶಿರಸ್ತೇದಾರ ಸುರೇಶ ಮ್ಯಾಗೇರಿ, ಮುಖಂಡರಾದ ರಾವುತ್ ತಳಕೇರಿ, ಕೆಡಿಪಿ ಸದಸ್ಯರಾದ ಪ್ರಕಾಶ ಗುಡಿಮನಿ ಮಾತನಾಡಿ, ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ರಮೇಶ ಹಡಪದ ವಹಿಸಿದ್ದರು.ಇದೇ ಸಂದರ್ಭದಲ್ಲಿ ಮುಖಂಡರಾದ ರೀಯಾಜ ಯಲಿಗಾರ, ಬಸಪ್ಪ ದೇವಣಗಾಂವ, ಕಾಸು ಭಜೆಂತ್ರಿ, ಸುನೀಲ್ ಪಾಟೀಲ, ಮಲ್ಲು ಹಡಪದ, ದೇವಾನಂದ ಹಡಪದ, ದೇವಿಂದ್ರ ಹಡಪದ, ಮಡು ಹಡಪದ, ಸೋಮರಾಯ ಹಡಪದ, ನಾಗರಾಜ ಹಡಪದ, ಸಾಯಿಬಣ್ಣ ಹಡಪದ, ಮುರ್ತುಜಾ ತಾಂಬೋಳಿ, ರಮೇಶ ಇಳಗೇರ, ಪಿಂಟೂ ಬಾಸುತ್ಕರ್ ಸೇರಿ ಹಲವರು ಭಾಗವಹಿಸಿದ್ದರು.
ಮೆರವಣಿಗೆ:ಶಿವಶರಣ ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ತ ಪಟ್ಟಣದ ಇಂಡಿ ರಸ್ತೆಯಲ್ಲಿ ಹಡಪದ ಅಪ್ಪಣ್ಣ ವೃತ್ತ ನಾಮಫಲಕವನ್ನು ಉದ್ಘಾಟಿಸಲಾಯಿತು. ನಂತರ ನಡೆದ ಮೆರವಣಿಗೆಯಲ್ಲಿ ಹಡಪದ ಅಪ್ಪಣ್ಣನವರ ಫೋಟೋ ವಚನಕಟ್ಟು ನೋಡುಗರನ್ನು ಆಕರ್ಷಿಸಿತು.