ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಣೆ ಮಾಡಿ ಮಾತನಾಡಿದರು
ಶಾಸಕರು, ಮಹನೀಯರ ಜಯಂತಿಯನ್ನು ಕೇವಲ ಆಚರಣೆ ಮಾಡಿದರೆ ಸಾಲದು, ಅವರು ಸಾರಿದ ಆದರ್ಶಗಳನ್ನು ಎಲ್ಲರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಬಾಳಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.ಭಾರತೀಯ ಜನತಾ ಪಕ್ಷವು ವಾಲ್ಮೀಕಿ ಮಹರ್ಷಿಗೆ ಹೆಚ್ಚು ಗೌರವ ಸಲ್ಲಿಸುತ್ತಾ ಬಂದಿದೆ. ಬಿಜೆಪಿ ಸರ್ಕಾರವಿದ್ದಾಗ ವಾಲ್ಮೀಕಿ ಜಯಂತಿಗೆ ರಜೆ ಘೋಷಿಸಿ ಸರ್ಕಾರದಿಂದ ಆಚರಣೆ ಮಾಡಲು ತೀರ್ಮಾನಿಸಲಾಯಿತು. ಕೇಂದ್ರ ಸರ್ಕಾರವು ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಮಹರ್ಷಿ ಹೆಸರಿಟ್ಟು ಆದಿಕವಿಗೆ ಗೌರವ ಸಲ್ಲಿಸಿದೆ ಎಂದು ಜ್ಯೋತಿಗಣೇಶ್ ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಎಚ್. ಹನುಮಂತರಾಜು, ಜಿಲ್ಲಾ ಉಪಾಧ್ಯಕ್ಷ ಊರುಕೆರೆ ವಿಜಯಕುಮಾರ್ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ದಿಲೀಪ್, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ವೈ.ಎಚ್. ರವಿಚಂದ್ರ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಗುಬ್ಬಿಗಂಗಣ್ಣ, ನಗರ ಮಂಡಲ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಕೇಶ್‌ಟಿ.ಆರ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ವಿರೂಪಾಕ್ಷಪ್ಪ, ಮುಖಂಡರಾದ ವಿನೋದ್, ಗಂಗೇಶ್ ಹದ್ದಿನಕಲ್ಲು, ಶಿವರಾಜು, ವಸಂತಕುಮಾರಿ, ಮಂಜುಳಾ ಮತ್ತಿತರರು ಭಾಗವಹಿಸಿ ವಾಲ್ಮೀಕಿ ಮಹರ್ಷಿಗೆಗೌರವ ಸಲ್ಲಿಸಿದರು.