ಕನ್ನಡಪ್ರಭ ವಾರ್ತೆ ಮೂಡಲಗಿ
ಪಟ್ಟಣದ ತಹಸೀಲ್ದಾರ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ನಡೆದ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಹಸೀಲ್ದಾರ ಶಿವಾನಂದ ಬಬಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಿಇಒ ಅಜಿತ ಮನ್ನಿಕೇರಿ, ಹನುಮಂತ ಗುಡ್ಲಮನಿ, ರಮೇಶ ಸನ್ನಕ್ಕಿ ಮಾತನಾಡಿದರು.ಸಿಡಿಪಿಒ ಯಲ್ಲಪ್ಪ ಗದಾಡಿ, ಹೆಸ್ಕಾಂ ಎಇಇ ಎಂ.ಎಸ್. ನಾಗನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಪಿಎಸ್‍ಐ ರಾಜು ಪೂಜೇರಿ, ತಾಪಂ ಅಧಿಕಾರಿ ಸಂಗಮೇಶ ರೋಡ್ಡನವರ, ಶಿರಸ್ತೇದಾರ ಪರುಶುರಾಮ ನಾಯ್ಕ, ಡಿಎಸ್‍ಎಸ್ ಮುಖಂಡರು, ಪುರಸಭೆ ಸದಸ್ಯರು ಮತ್ತಿತರರು ಉಪಸ್ಥಿರಿದ್ದರು.
ತಾಲೂಕಿನ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಕನಕದಾಸರ 537ನೇ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನಕದಾಸರು ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ದಾರ್ಶನಿಕರಾಗಿ, ಕನ್ನಡ ನಾಡಿನ ಸಾಂಸ್ಕತಿಕ ಪರಂಪರೆಗೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.
ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆ: ತಾಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ದಾಸವರಣ್ಯ ಕನಕದಾಸರ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಡಾ.ಸುರೇಶ ಹನಗಂಡಿ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.