ಕನ್ನಡಪ್ರಭ ವಾರ್ತೆ ಆಳಂದ
ಆಳಂದ ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ಪ್ರವೇಶ ಪರೀಕ್ಷೆಗೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅತ್ಯಂತ ಹುರುಪಿನಿಂದ ಭಾಗವಹಿಸಿ ಪರೀಕ್ಷೆ ಬರೆದರು. ಪ್ರವೇಶ ಪರೀಕ್ಷೆಯಲ್ಲಿ ಸುಮಾರು 1500 ವಿದ್ಯಾರ್ಥಿಗಳು ನೋಂದಣಿ ಮಾಡಿ ಪರೀಕ್ಷೆ ಬರೆದರು.
ಪ್ರವೇಶ ಪರೀಕ್ಷೆಯಲ್ಲಿ ಮೊದಲ 20 ರ್‍ಯಾಂಕ್ ಬಂದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾಲೇಜಿನಲ್ಲಿ ಉಚಿತ ಪ್ರವೇಶ, ಮೊದಲ ರ್‍ಯಾಂಕ್ ಬಂದ ವಿದ್ಯಾರ್ಥಿಗೆ 1 ಟ್ಯಾಬ್, 2ನೇ ರ್‍ಯಾಂಕ್ ಬಂದವರಿಗೆ ಪಿಯುಸಿ ವಿಜ್ಞಾನ ವಿಭಾಗದ ಸಂಪೂರ್ಣ ಪಠ್ಯಪುಸ್ತಕ, 3ನೇ ರ್‍ಯಾಂಕ್ ಬಂದವರಿಗೂ ಪಿಯುಸಿ ವಿಜ್ಞಾನ ವಿಭಾಗದ ಸಂಪೂರ್ಣ ಪಠ್ಯಪುಸ್ತಕ ಸಂಸ್ಥೆಯ ವತಿಯಿಂದ ನೀಡಲಾಗುವುದು.ಕಾಲೇಜಿನಲ್ಲಿ ನೀಟ್, ಸಿಇಟಿ, ಜೆಇಇ ಸೇರಿದಂತೆ ಅನೇಕ ರಾಷ್ಟ್ರ ಮತ್ತು ರಾಜ್ಯಮಟ್ಟದ ಕೋರ್ಸಗಳಿಗೆ ಪಿಯುಸಿ ಪ್ರಥಮ ವರ್ಷದಿಂದಲೇ ತರಬೇತಿ ನೀಡಲಾಗುತ್ತಿದೆ. ಕಳೆದ ಬಾರಿ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ ಬಂದಿದೆ. ತಾಲೂಕಿನ ವಿದ್ಯಾರ್ಥಿಗಳಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಈ ಬಾರಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ.