ಬೆಲೆ ಏರಿಕೆ ತಡೆಗೆ ಗ್ಯಾರಂಟಿ ಯೋಜನೆ ಸಹಕಾರಿ

KannadaprabhaNewsNetwork |  
Published : Mar 10, 2024, 01:32 AM IST
ಫೋಟೊ: 9ಎಚ್‌ಎನ್‌ಎಲ್1ಹಾನಗಲ್ಲಿನಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸದಸ್ಯರನ್ನು ಶಾಸಕ ಶ್ರೀನಿವಾಸ ಮಾನೆ ಸನ್ಮಾನಿಸಿ, ಅಭಿನಂದಿಸಿದರು. | Kannada Prabha

ಸಾರಾಂಶ

ಚುನಾವಣೆ ಸಮಯದಲ್ಲಿ ಭರವಸೆ ನೀಡಿದ ಅಷ್ಟೂ ಗ್ಯಾರಂಟಿ ಯೋಜನೆಗಳನ್ನೂ ಕೆಲವೇ ತಿಂಗಳಲ್ಲಿ ಜಾರಿಗೆ ತಂದು ನುಡಿದಂತೆ ನಡೆದಿದೆ. ಅರ್ಹರಿಗೆ ಈ ಎಲ್ಲ ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ಮುಟ್ಟಬೇಕು ಎನ್ನುವ ಉದ್ದೇಶದಿಂದ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚನೆ

ಹಾನಗಲ್ಲ: ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ಜೀವನ ನಿರ್ವಹಣೆಗೆ ಪರಿತಪಿಸುವ ಸ್ಥಿತಿ ಇದೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ರಾಜ್ಯದ ಜನಸಾಮಾನ್ಯರಿಗೆ ಕನಿಷ್ಟ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಸರ್ಕಾರ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಪಟ್ಟಣದ ಕಾಂಗ್ರೆಸ್‌ ಪಕ್ಷದ ಜನ ಸಂಪಕ ಕಚೇರಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರು,ಸದಸ್ಯರನ್ನಾಗಿ ನೇಮಕಗೊಂಡ ಸಮಿತಿಯ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಸದಸ್ಯರಾದ ರಾಜೂ ಗಾಡಗೇರ, ಮಂಜುಳಾ ಹುರುಳಿಕುಪ್ಪಿ, ರಾಮಚಂದ್ರ ಕಲ್ಲೇರ, ಲಕ್ಷ್ಮೀಬಾಯಿ ಪಾಟೀಲ, ಲಿಂಗರಾಜ ಮಡಿವಾಳರ, ಸುಮಾ ಸುಣಗಾರ, ಮಹ್ಮದ್‌ರಫೀಕ್ ಉಪ್ಪಣಸಿ, ರಾಧಾ ಇಂಗಳಕಿ, ಪ್ರವೀಣ ಹಿರೇಮಠ, ಪದ್ಮರಾಜು ಬೇಂದ್ರೆ, ಬಸನಗೌಡ ಪಾಟೀಲ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಬರದಿಂದ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ಜೀವನ ನಿರ್ವಹಣೆಗೆ ಪರಿತಪಿಸುವ ಸ್ಥಿತಿ ಇದೆ.ಇಂತಹ ಸಂದಿಗ್ಧ ಸಂದರ್ಭದಲ್ಲಿ ರಾಜ್ಯದ ಜನಸಾಮಾನ್ಯರಿಗೆ ಕನಿಷ್ಟ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಸರ್ಕಾರ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಚುನಾವಣೆ ಸಮಯದಲ್ಲಿ ಭರವಸೆ ನೀಡಿದ ಅಷ್ಟೂ ಗ್ಯಾರಂಟಿ ಯೋಜನೆಗಳನ್ನೂ ಕೆಲವೇ ತಿಂಗಳಲ್ಲಿ ಜಾರಿಗೆ ತಂದು ನುಡಿದಂತೆ ನಡೆದಿದೆ. ಅರ್ಹರಿಗೆ ಈ ಎಲ್ಲ ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ಮುಟ್ಟಬೇಕು ಎನ್ನುವ ಉದ್ದೇಶದಿಂದ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯ ಅಧ್ಯಕ್ಷರು, ಸದಸ್ಯರು ಕಾಳಜಿ ವಹಿಸಿ ಅರ್ಹರಿಗೆ ಯೋಜನೆಗಳ ಲಾಭ ದೊರಕಿಸುವಲ್ಲಿ ಕಾಳಜಿ ವಹಿಸುವಂತೆ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವು ಭದ್ರಾವತಿ, ತಾಪಂ ಕೆಡಿಪಿ ಸದಸ್ಯ ಮಾರ್ತಾಂಡಪ್ಪ ಮಣ್ಣಮ್ಮನವರ, ವೀರೇಶ ಬೈಲವಾಳ, ಸಿಕಂದರ್ ವಾಲಿಕಾರ, ಉಮೇಶ ದಾನಪ್ಪನವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ