ಅಂಬೇಡ್ಕರ್‌ ಪ್ರತಿಮೆ ಅನಾವರಣಕ್ಕೆ ಆಗ್ರಹಿಸಿ ಇಂದು ಅರೆಬೆತ್ತಲೆ ಚಳವಳಿ

KannadaprabhaNewsNetwork |  
Published : Aug 25, 2026, 02:00 AM IST
24ಎಚ್ಎಸ್ಎನ್17 :  | Kannada Prabha

ಸಾರಾಂಶ

ಸರ್ಕಾರದ ಶಿಷ್ಟಾಚಾರದಂತೆ ಪ್ರತಿಮೆಯನ್ನು ಶೀಘ್ರವೇ ಅನಾವರಣಗೊಳಿಸಬೇಕು. ಆಡಳಿತಕ್ಕೆ ಲೋಕಾರ್ಪಣೆ ಮಾಡಲು ಸಾಧ್ಯವಾಗದಿದ್ದರೆ ಅವಕಾಶ ನೀಡಿದಲ್ಲಿ ಅಗತ್ಯ ವ್ಯವಸ್ಥೆಗಳನ್ನು ತಾವೇ ಮಾಡಿಕೊಂಡು ಕಾರ್ಯಕ್ರಮ ನಡೆಸಲು ಸಿದ್ಧರಿರುವುದಾಗಿ ಹೇಳಿದರು. ಆ.೨೫ರಂದು ಕೆಆರ್ ವೃತ್ತದಿಂದ ತಾಲೂಕು ಕಚೇರಿ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಯವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಬಳಿಕ ಪ್ರತಿಭಟನೆ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಚಳುವಳಿಯಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ಮಿನಿವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ೧೦ ತಿಂಗಳು ಕಳೆದರೂ ಅಧಿಕೃತವಾಗಿ ಅನಾವರಣಗೊಳಿಸದ ತಾಲೂಕು ಆಡಳಿತದ ಕ್ರಮವನ್ನು ಖಂಡಿಸಿ ಆ.೨೫ರಂದು ಅರೆಬೆತ್ತಲೆ ಚಳುವಳಿ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ನಂಜುಂಡ ಮೈಮ್ ತಿಳಿಸಿದ್ದಾರೆ.ಪಟ್ಟಣದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯಾಗಿ ಇಷ್ಟು ಸಮಯ ಕಳೆದಿದ್ದರೂ ಲೋಕಾರ್ಪಣೆಗೆ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಈ ಕುರಿತು ಹಲವು ಬಾರಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಸರ್ಕಾರದ ಶಿಷ್ಟಾಚಾರದಂತೆ ಪ್ರತಿಮೆಯನ್ನು ಶೀಘ್ರವೇ ಅನಾವರಣಗೊಳಿಸಬೇಕು. ಆಡಳಿತಕ್ಕೆ ಲೋಕಾರ್ಪಣೆ ಮಾಡಲು ಸಾಧ್ಯವಾಗದಿದ್ದರೆ ಅವಕಾಶ ನೀಡಿದಲ್ಲಿ ಅಗತ್ಯ ವ್ಯವಸ್ಥೆಗಳನ್ನು ತಾವೇ ಮಾಡಿಕೊಂಡು ಕಾರ್ಯಕ್ರಮ ನಡೆಸಲು ಸಿದ್ಧರಿರುವುದಾಗಿ ಹೇಳಿದರು. ಆ.೨೫ರಂದು ಕೆಆರ್ ವೃತ್ತದಿಂದ ತಾಲೂಕು ಕಚೇರಿ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆಯವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಬಳಿಕ ಪ್ರತಿಭಟನೆ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಚಳುವಳಿಯಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಶ್ರವಣಬೆಳಗೊಳ ಮಂಡಲ ಬಿಜೆಪಿ ಅಧ್ಯಕ್ಷ ಪರಮ ಗಂಗಾಧರ್‌, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್, ಗನ್ನಿ ವಿಶ್ವನಾಥ್ ಹಾಗೂ ಮುಖಂಡರಾದ ಮಣಿಕಂಠ, ಸಿ. ಜಿ. ಕುಮಾರ್ ಉಪಸ್ಥಿತರಿದ್ದರು.ಆ.೨೫ಕ್ಕೆ ಹೋರಾಟದ ಕರೆ:

ಕೆಆರ್ ವೃತ್ತದಿಂದ ತಾಲೂಕು ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆಯವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಚಳುವಳಿಯಲ್ಲಿ ಭಾಗವಹಿಸಲಿವೆ ಎಂದು ಮುಖಂಡರು ತಿಳಿಸಿದ್ದಾರೆ.೧೦ ತಿಂಗಳಾದರೂ ಏಕೆ ಅನಾವರಣವಾಗಿಲ್ಲ?

ಮಿನಿವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಿ ೧೦ ತಿಂಗಳು ಕಳೆದಿದ್ದರೂ ಅಧಿಕೃತ ಲೋಕಾರ್ಪಣೆ ನಡೆಯದಿರುವುದಕ್ಕೆ ತಾಲೂಕು ಆಡಳಿತ ಸ್ಪಷ್ಟನೆ ನೀಡಬೇಕು ಎಂದು ನಂಜುಂಡ ಮೈಮ್ ಒತ್ತಾಯಿಸಿದ್ದಾರೆ. ವಿಳಂಬ ಮುಂದುವರಿದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆದ್ದಾರಿ ಸೇತುವೆ ದುರಸ್ತಿ ಮರೀಚಿಕೆ
ಜನಸಾಮಾನ್ಯರ ಕೆಲಸ ಮಾಡಿಕೊಡಲು ಪಕ್ಷ ಭೇದ ಬೇಡ: ಡಾ.ಕೆ.ಸುಧಾಕರ್