ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಆವರಣದಲ್ಲಿ ಶ್ರೀಶಂಭುಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಬಿಇಡಿ, ಬಿಪಿಇಡಿ ಮತ್ತು ಎಂಪಿಇಡಿ ವಿದ್ಯಾರ್ಥಿಗಳಿಂದ ಮಹಾತ್ಮಾಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ಆಯೋಜಿಸಿದ್ದ ‘ಸ್ವಚ್ಛತಾ ಆಂದೋಲನ’ದಲ್ಲಿ ಮಾತನಾಡಿದರು.
ಸ್ವಚ್ಛತೆಯೇ ಮೊದಲ ಆದ್ಯತೆಯಾಗಬೇಕು. ಎಷ್ಟೇ ಔಷಧೋಪಚಾರ ಒದಗಿಸಿದರೂ ಮನುಷ್ಯನ ಆರೋಗ್ಯ ಸುಧಾರಿಸುವುದಿಲ್ಲ. ಮನೆ ಮತ್ತು ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಉತ್ತಮ ಆರೋಗ್ಯ ಸಾಧ್ಯ ಎಂದರು.ಎಸ್‌ಎಸ್ ಇಟಿ ಟ್ರಸ್ಟ್ ಉಪಾಧ್ಯಕ್ಷ ಎಂ.ಪಂಚಲಿಂಗೇಗೌಡ ಮಾತನಾಡಿ, ನಮ್ಮ ಸಂಸ್ಥೆಯಿಂದ ಸ್ವಚ್ಛತಾ ಆಂದೋಲನ ಎಂಬ ವಿಭಿನ್ನ ಕಾರ್ಯಕ್ರಮದ ಮೂಲಕ ಮಹಾತ್ಮಾಗಾಂಧಿಜಿ ಜಯಂತಿ ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮೋಹನ್ ರಾಜ್, ಶಿಕ್ಷಕರಾದ ಶಶಿ, ಶಿವಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಪುಟ್ಟಸ್ವಾಮಿ, ವಿಜಯಕುಮಾರ್, ನಾನ್ ಕ್ಲಿನಿಕಲ್ ಸೂಪರ್ ವೈಸರ್ ಎಲೆಕೆರೆ ಶುಭ, ರೈತಸಂಘದ ಮುಖಂಡ ರೈಟರ್ ಸ್ವಾಮಿಗೌಡ ಇತರರಿದ್ದರು. ಇದೇ ವೇಳೆ ನೂರಾರು ವಿದ್ಯಾರ್ಥಿಗಳು ಆಸ್ಪತ್ರೆ ಆವರಣದಲ್ಲಿ ಬೆಳದಿದ್ದ ಗಿಡ, ಗಂಟಿಗಳು ಹಾಗೂ ಕಸ, ಕಡ್ಡಿಗಳನ್ನು ತೆರವುಗೊಳಿಸಿದರು.