- ಲಿಂ. ಉಜ್ಜಯಿನಿ ಸಿದ್ಧಲಿಂಗ ಶ್ರೀ ತಪಸ್ಸಿನ ಶತಮಾನೋತ್ಸವ ಸಮಾರಂಭ
ಕನ್ನಡಪ್ರಭ ವಾರ್ತೆ ಹರಿಹರ ಭಾರತೀಯ ಅಧ್ಯಾತ್ಮ ಸಂಪತ್ತು ಅದ್ಭುತ. ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಅಧ್ಯಾತ್ಮದ ಅರಿವು ಸಾಧನೆ ಮುಖ್ಯ. ವೀರಶೈವ ಧರ್ಮದ ತತ್ವತ್ರಯಗಳ ಪರಿಪಾಲನೆಯಿಂದ ಸುಖ, ಶಾಂತಿ ಪ್ರಾಪ್ತವಾಗುವುದೆಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀ ನುಡಿದರು.
ನಗರದ ಸಿದ್ಧೇಶ್ವರ ಪ್ಯಾಲೇಸ್‌ನಲ್ಲಿ ಶ್ರೀ ಮಹಾತಪಸ್ವಿ ಫೌಂಡೇಶನ್ ಶನಿವಾರ ಆಯೋಜಿಸಿದ್ದ ಮಹಾತಪಸ್ವಿ ಲಿಂ. ಉಜ್ಜಯಿನಿ ಸಿದ್ಧಲಿಂಗ ಶ್ರೀ ಅವರು ಲೋಕಕಲ್ಯಾಣಾರ್ಥ ತಪಸ್ಸಸ್ಸು ಆಚರಿಸಿದ ಶತಮಾನೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಪರಿಪಕ್ವ ಸಮಾಜ ನಿರ್ಮಾಣ ಕಾರ್ಯವೇ ನಿಜವಾದ ಧರ್ಮವೆಂದರಿತು, ಬದುಕಿನ ಹಿರಿಮೆ ಮತ್ತು ರಹಸ್ಯ ಬೋಧಿಸಿ, ಸನ್ಮಾರ್ಗಕ್ಕೆ ಕರೆತಂದ ಯುಗಪುರುಷ ಲಿಂ. ಉಜ್ಜಯಿನಿ ಸಿದ್ಧಲಿಂಗ ಶ್ರೀ ಎಂದರು.ಅಂತರಂಗ, ಬಹಿರಂಗ ಶುದ್ಧಿಯಿಂದ ಬದುಕಿಗೆ ಶ್ರೇಯಸ್ಸು ದೊರಕುವುದೆಂದು ನಂಬಿ, ಶಿವಾಗಮಗಳ ಧರ್ಮ ಸಾಹಿತ್ಯವನ್ನು ಜನರ ಮನೆ ಮನಗಳಿಗೆ ತಲುಪಿಸಲು ಗಟ್ಟಿ ಹೆಜ್ಜೆಯನ್ನಿಟ್ಟರು. ಜೀವನದ ಜಂಜಡಗಳಲ್ಲಿ ಸಿಲುಕಿರುವ ಮನುಷ್ಯನಿಗೆ ಆದರ್ಶ ಸಂಸ್ಕಾರ ಮತ್ತು ಸದ್ವಿಚಾರ ಬೋಧಿಸಿ, ಅವರಲ್ಲಿ ಸ್ಫೂರ್ತಿ ಮತ್ತು ಚೈತನ್ಯ ಶಕ್ತಿ ಹೆಚ್ಚಿಸಿದ ಪರಮ ವಿರಾಗಿ ತಪಸ್ವಿಗಳಾಗಿದ್ದರು ಎಂದರು.
ಆಶಯ ನುಡಿಗಳನ್ನಾಡಿದ ಅವಧೂತ ಕವಿ ಗುರುರಾಜ ಗುರೂಜಿ ಮಾತನಾಡಿ, ಭಾರತೀಯ ಅಧ್ಯಾತ್ಮ ಸಂಪತ್ತನ್ನು ಹೆಚ್ಚಿಸಿದ ಕೀರ್ತಿ ಲಿಂ. ಶ್ರೀ ಉಜ್ಜಯಿನಿ ಶ್ರೀ ಅವರಿಗೆ ಸಲ್ಲುತ್ತದೆ. ಅಂಗ ಅವಗುಣಗಳನ್ನು ದೂರ ಮಾಡಿ ಲಿಂಗ ಗುಣ ಕರುಣಿಸಿದ ಕಾರುಣ್ಯ ಜ್ಯೋತಿ ಅವರು. ಉದಾತ್ತವಾದ ಜೀವನ ಮೌಲ್ಯಗಳನ್ನು ಪರಿಪಾಲಿಸಿ ಜನ ಸಮುದಾಯದ ಶ್ರೇಯಸ್ಸಿಗೆ ನಿರಂತರ ಕೃಷಿಗೈದವರು ಎಂದರು.
ಪ್ರೊ. ಎಸ್.ಎಂ. ಗಂಗಾಧರಯ್ಯ ಮಹಾತಪಸ್ವಿ ಫೌಂಡೇಶನ್ ಸಾಧನೆಯ ಹತ್ತು ವರ್ಷದ ಅಭಿಯಾನದ ಸಮಗ್ರ ನೋಟ ಗ್ರಂಥವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದಾವಣಗೆರೆ ಅಶ್ವಿನಿ ಆಯುರ್ವೇದ ವಿಜ್ಞಾನ ನಿರ್ದೇಶಕ ಡಾ. ಯು.ಎಂ. ಜ್ಞಾನೇಶ್ವರ ಅವರಿಗೆ “ಆಯುರ್ ತಪೋ ಜ್ಞಾನರತ್ನ” ಪ್ರಶಸ್ತಿ ಪ್ರದಾನ ಮಾಡಲಾಯಿತು.
- - -
- ಬಿ.ಪಿ. ಹರೀಶ, ಶಾಸಕ, ಹರಿಹರ ಕ್ಷೇತ್ರ.
-08ಎಚ್‌ಆರ್‌ಆರ್‌೦1 ಹಾಗೂ ೦1ಎ: