ಯೋಗದಿಂದ ಆರೋಗ್ಯವಂತ ಸಮಾಜ: ಆನಂದ್ ಸಿ ಕುಂದರ್

KannadaprabhaNewsNetwork |  
Published : Aug 08, 2024, 01:38 AM IST
ಯೋಗ7 | Kannada Prabha

ಸಾರಾಂಶ

ಯೋಗದ ಮೂಲಕ ಆರೋಗ್ಯವಂತ ಸಮಾಜ ಸಾಧ್ಯ ಎಂಬುವುದನ್ನು ಪೂರ್ವಜರು ತೋರಿಸಿಕೊಟ್ಟಿದ್ದಾರೆ ಎಂದು ಆನಂದ ಸಿ ಕುಂದರ್‌ ಹೇಳಿದರು. ವಲಯ ಮಟ್ಟದ ಯೋಗಾಸನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕೋಟ

ಯೋಗದ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಸಾಧ್ಯವಿದೆ ಎಂಬುವುದನ್ನು ನಮ್ಮ ಪೂರ್ವಜರು ತೋರಿಸಿಕೊಟ್ಟಿದ್ದಾರೆ ಎಂದು ಗೀತಾನಂದ ಫೌಂಡೇಶನ್ ಮಣೂರು ಇದರ ಪ್ರವರ್ತಕ ಆನಂದ್ ಸಿ. ಕುಂದರ್ ನುಡಿದರು.

ಅವರು ಇಲ್ಲಿನ ಕೋಟತಟ್ಟು ಶಾಲಾ ಸಭಾಂಗಣದಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ವಲಯ ಮಟ್ಟದ ಯೋಗಾಸನ ಸ್ಪರ್ಧೆ 2024-25 ನ್ನು ಉದ್ಘಾಟಿಸಿ ಮಾತನಾಡಿದರು.

ಪತಂಜಲಿ ಮುನಿಗಳು ಯೋಗವನ್ನು ಈ ರಾಷ್ಟ್ರಕ್ಕೆ ಧಾರೆ ಎರೆದಿದ್ದಾರೆ, ಆದರೆ ಅದನ್ನು ನಾವುಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು, ಯೋಗದಿಂದ ಮಾನಸಿಕ ಮನೋಸ್ತೈರ್ಯ ವೃದ್ಧಿಸುವುದಲ್ಲದೆ ದೈಹಿಕ ಬೆಳವಣಿಗೆಗೆ ಪೂರಕವಾಗಿದೆ. ಇದನ್ನು ಸ್ಪರ್ಧೆಯ ಮೂಲಕ ಮಕ್ಕಳಿಗೆ ಮಹತ್ವ ಸಾರುವ ಕಾರ್ಯ ಶ್ಲಾಘನೀಯ ಎಂದು ಇಲಾಖೆಯನ್ನು ಪ್ರಶಂಸಿಸಿದರು.

ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುಲೇಮಾನ್ ಸಾಹೇಬ್ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ದೈಹಿಕ ಶಿಕ್ಷಣ ಶಿಕ್ಷಕ ಸಂಘ ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್, ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಬ್ರಹ್ಮಾವರ ತಾಲೂಕು ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಕೋಟತಟ್ಟು ಗ್ರಾಪಂ ಸದಸ್ಯರಾದ ರವೀಂದ್ರ ತಿಂಗಳಾಯ, ವಿದ್ಯಾ ಸಾಲಿಯಾನ್, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಮೂರ್ತಿ ಕೆ., ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮಣ್ ಸುವರ್ಣ, ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯ ಅಧಿಕಾರಿ ಅರ್ಚನಾ ಉಪಸ್ಥಿತರಿದ್ದರು.

ಶಿಕ್ಷಕರಾದ ಗಣೇಶ್ ಆಚಾರ್ ನಿರೂಪಣೆಗೈದರು. ಶಾಲಾ ಮುಖ್ಯ ಶಿಕ್ಷಕಿ ಜಾನಕಿ ಭಟ್ ಸ್ವಾಗತಿಸಿದರು.

ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಪದ್ಮಾವತಿ ಪ್ರಾಸ್ತಾವನೆ ಸಲ್ಲಿಸಿದರು. ಸಹಶಿಕ್ಷಕಿ ಸಂಗೀತ ಕೋಟ್ಯಾನ್ ವಂದಿಸಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ