ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ಧಾರ ಗ್ರಾಮದ ಅಭಿವೃದ್ಧಿಗೆ ಪೂರಕ ಎಂದು ಆಧ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ. ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ 10 ಲಕ್ಷ ರು. ಮೊತ್ತದ ಚೆಕ್ ಹಸ್ತಾಂತರಿಸಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ಧಾರ ಗ್ರಾಮದ ಅಭಿವೃದ್ಧಿಗೆ ಪೂರಕ ಎಂದು ಆಧ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ 10 ಲಕ್ಷ ರು. ಮೊತ್ತದ ಚೆಕ್ ಹಸ್ತಾಂತರಿಸಿ ಅವರು ಮಾತನಾಡಿದರು.
ಪುನರೂರು ಶ್ರೀ ವಿಶ್ವನಾಥ ದೇವಸ್ಥಾನ ಕಾರಣಿಕ ನೆಲೆಯನ್ನು ಹೊಂದಿದ್ದು ಭಕ್ತರ ಇಷ್ಟಾರ್ಥ ಈಡೇರಿಸುವ ಶ್ರೀ ವಿಶ್ವನಾಥ ದೇವರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರಿಸುವ ಮೂಲಕ ಊರ ಪರವೂರ ಭಕ್ತರು, ದಾನಿಗಳು ಗ್ರಾಮಸ್ಥರು ಮಾದರಿಯಾಗಬೇಕೆಂದು ತಿಳಿಸಿದರು.
ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಡಾ.ಹರಿಕೃಷ್ಣ ಪುನರೂರು ಮಾತನಾಡಿ, ಮುಂದಿನ ದಿನಗಳಲ್ಲಿ ಭಕ್ತರ ಸಹಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ನಡೆದು ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿದೆಯೆಂದು ಹೇಳಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಜ್ಯೋತಿಷಿ ವಿಶ್ವನಾಥ ಭಟ್, ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್ , ಗೋಪಿನಾಥ ರಾವ್, ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಪುರಂದರ ಶೆಟ್ಟಿಗಾರ್ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.