ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲರ ಜನತಾದರ್ಶನಗದಗ: ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ಸ್ಥಳದಲ್ಲಿಯೇ ಪರಿಹಾರ:ಮಕ್ಕಳಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಸಚಿವ ಎಚ್.ಕೆ.ಪಾಟೀಲ ಅವರಲ್ಲಿ ಪೋಷಕರು ಸಹಾಯ ಹಸ್ತ ಚಾಚುತ್ತಿದ್ದಂತೆ, ಸಚಿವರು ಮಕ್ಕಳ ಆರೋಗ್ಯ ಸುಧಾರಣೆಗೆ ಹಾಗೂ ಉತ್ತಮ ಚಿಕಿತ್ಸೆ ದೊರಕಿಸಿಕೊಡುವ ಭರವಸೆ ನೀಡಿದರು. ಈ ಕುರಿತು ವೈದ್ಯರೊಂದಿಗೆ ತಕ್ಷಣ ಮಾತನಾಡಿ ಖಂಡಿತವಾಗಿ ಮಕ್ಕಳ ಚಿಕಿತ್ಸೆಗೆ ಅಗತ್ಯದ ಸಹಕಾರ, ಸಹಾಯ ಮಾಡಲಾಗುವುದು ಎಂದು ಪೋಷಕರಿಗೆ ಧೈರ್ಯ ತುಂಬಿದರು.
ಕೈಗಾರಿಕೆ ನಿವೇಶನ, ತುರ್ತು ಪಡಿತರ ಚೀಟಿ, ಸ್ವಯಂ ಉದ್ಯೋಗ ಹಾಗೂ ವಸತಿಗೆ ಸಂಬಂಧಿಸಿದ ಅಹವಾಲುಗಳಿಗೆ ಸಚಿವರು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.ಸೌಲಭ್ಯ ವಿತರಣೆ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ತಾಲೂಕು ಪಂಚಾಯತ ವತಿಯಿಂದ ಗಣಕ ಯಂತ್ರ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಶ್ರವಣ ಸಾಧನಗಳನ್ನು ಫಲಾನುಭವಿಗಳಿಗೆ ವಿತರಿಸಿದರು.