ಕುರುಗೋಡು: ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ಮಹಾ ರಥೋತ್ಸವ ವಿಜೃಂಭಣೆಯಿಂದ ಸೋಮವಾರ ಅದ್ಧೂರಿಯಾಗಿ ನಡೆಯಿತು.ರಥೋತ್ಸವ ನಿಮಿತ್ತ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ದೊಡ್ಡಬಸವೇಶ್ವರ ದೇವರಿಗೆ ವಿಶೇಷ ಅಭಿಷೇಕ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ಉತ್ಸವದ ಮೊದಲಿಗೆ ಕೆರೆಕೆರೆ, ಮುಷ್ಟಗಟ್ಟೆ ಮತ್ತು ಸೋಮಲಾಪುರ ಗ್ರಾಮದಿಂದ ಧೂಳುಗಾಯಿ, ಕಳಸ ಮತ್ತು ಪೂರ್ಣಕುಂಭದ ಮೆರವಣಿಗೆ ನಡೆಯಿತು. ಬೆಳಗಿನಜಾವ ನೂರಾರು ಭಕ್ತರು ದೇವಸ್ಥಾನದಲ್ಲಿ ದೀಡ್ ನಮಸ್ಕಾರ ಮತ್ತು ೩೩ ಗ್ರಾಮಗಳಿಂದ ಪಾದಯಾತ್ರೆಯಲ್ಲಿ ಬಂದು ದೇವರ ದರ್ಶನ ಪಡೆದು ಪುನೀತರಾದರು.ನಂತರ ಹೂವುಗಳಿಂದ ಅಲಂಕೃತಗೊಂಡ ದೊಡ್ಡಬಸವೇಶ್ವರ ಗೂಳಿ ಮೆರವಣಿಗೆ ಸಕಲ ವಾದ್ಯ ಹಾಗೂ ಮುತ್ತೈದೆಯರ ಕಳಸದೊಂದಿಗೆ ನೀಲಮ್ಮ ಮಠಕ್ಕೆ ತೆರಳಿ ವಿಶೇಷ ಪೂಜೆ ನಡೆಸಿ ಮಠದ ಸ್ವಾಮಿಯನ್ನು ಮೆರವಣಿಗೆ ಮೂಲಕ ರಥಕ್ಕೆ ಕೆರೆ ತರಲಾಯಿತು.ಕುರುಗೋಡು ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಹೊರ ಜಿಲ್ಲೆ ಹಾಗೂ ರಾಜ್ಯದ ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಇದ್ದರು. ತಂಪು ಪಾನೀಯ ವಿತರಣೆ:ರಥೋತ್ಸವದ ನಿಮಿತ್ತ ನಾನಾ ಯುವಕರು ನೀರಿನ ಮಜ್ಜಿಗೆ ಅರವಟ್ಟಿಗೆ ತೆರೆದು ಬಿಸಿಲಲ್ಲಿ ಬೆಂದ ಜನರಿಗೆ ತಂಪು ನೀಡಿದರು. ರಥೋತ್ಸವದಲ್ಲಿ ಪಾಲ್ಗೊಂಡ ಜನರಿಗೆ ಇಲಾಖೆ ವತಿಯಿಂದ ರೈತ ಸಮುದಾಯ ಭವನದಲ್ಲಿ ಹಾಗೂ ಖಾಸಗಿ ಮತ್ತು ನಾನಾ ಧಾರ್ಮಿಕ ಸಂಘಗಳು ಪಟ್ಟಣದ ಕಂಪ್ಲಿ, ಗೆಣಿಕೆಹಾಳ್, ಮುಷ್ಟಗಟ್ಟೆ ರಸ್ತೆ, ರಾಘವಾಂಕ ಮಠದಲ್ಲಿ ಬಾದನಹಟ್ಟಿಯಲ್ಲಿ, ಬಳ್ಳಾರಿ ರಸ್ತೆಯಲ್ಲಿ ಉಚಿತ ಅನ್ನದಾಸೋಹ ಹಮ್ಮಿಕೊಳ್ಳಲಾಗಿತ್ತು. ಬಿಗಿಭದ್ರತೆ: