ನಾಪೋಕ್ಲು: ಸಹಶಿಕ್ಷಕಿಗೆ ಸನ್ಮಾನ, ಬೀಳ್ಕೊಡುಗೆ

KannadaprabhaNewsNetwork |  
Published : Sep 01, 2024, 01:59 AM IST
ಬಲ್ಲಮಾವಟಿ  ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಹ ಶಿಕ್ಷಕಿ ಎಂ.ಎ ಕಾವೇರಿಯಮ್ಮ ಅವರನ್ನು ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ಪರವಾಗಿ ಶನಿವಾರ ಸನ್ಮಾನಿಸಿ ಬೀಳ್ಕೊಡಲಾಯಿತು. | Kannada Prabha

ಸಾರಾಂಶ

ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಬ್ದಾರಿ ಶಿಕ್ಷಕರದ್ದು. ಶಿಕ್ಷಕಿಯಾಗಿ ಕಾವೇರಿಯಮ್ಮ ಉತ್ತಮ ಸೇವಾ ಮನೋಭಾವನೆ ಹೊಂದಿದ್ದರು ಎಂದು ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಹ ಶಿಕ್ಷಕಿ ಎಂ. ಎ. ಕಾವೇರಿಯಮ್ಮ ಅವರನ್ನು ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ಪರವಾಗಿ ಶನಿವಾರ ಸನ್ಮಾನಿಸಿ ಬೀಳ್ಕೊಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎ. ಕೆ. ಮನುಮುತ್ತಪ್ಪ ವಹಿಸಿದ್ದರು. ಕಾರ್ಯದರ್ಶಿ ಚಂಗೇಟಿರ ಅಚ್ಚಯ್ಯ ಮಾತನಾಡಿ ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರದ್ದು. ಸಮಾಜ ವಿಜ್ಞಾನ ಶಿಕ್ಷಕಿಯಾಗಿ ಕಾವೇರಿಯಮ್ಮ ಉತ್ತಮ ಸೇವಾ ಮನೋಭಾವನೆಯನ್ನು ಹೊಂದಿದ್ದರು ಎಂದರು.

ನಿರ್ದೇಶಕ ಮುಕ್ಕಾಟಿರ ವಿನಯ್ ಮಾತನಾಡಿ, ಸಹನೆ, ವಿನಯತೆ, ಸರಳ ಜೀವನ, ಕ್ಷಮಾ ಗುಣ ಸೇರಿದಂತೆ ಉತ್ತಮ ಶಿಕ್ಷಕರಲ್ಲಿ ಇರಬೇಕಾದ ಗುಣಗಳನ್ನು ಕಾವೇರಿಯಮ್ಮ ಹೊಂದಿದ್ದರು. ಅವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು.

ಆಡಳಿತ ಮಂಡಳಿ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಪ್ರೌಢಶಾಲೆ ಹಲವು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿದೆ. ಉತ್ತಮ ಆಡಳಿತ ಮಂಡಳಿ ಹಾಗೂ ಶಿಕ್ಷಕರಿಂದ ಸಂಸ್ಥೆಯು ಪ್ರಗತಿಯನ್ನು ಕಂಡಿದೆ ಎಂದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಮುಕ್ಕಾಟಿರ ಸುತನ್ ಸುಬ್ಬಯ್ಯ, ಕಾರ್ಯದರ್ಶಿ ಚಂಗೇಟೆರ ಅಚ್ಚಯ್ಯ, ಸಂಚಾಲಕ ನುಚ್ಚುಮಣಿಯಂಡ ಚಿಂಗಪ್ಪ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು, ಎಂ.ಎ ಕಾವೇರಿಯಮ್ಮ ಪತಿ ಮೂವೇರ ನಾಣಯ್ಯ, ಶಾಲೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ