ಮಂಗಳೂರಲ್ಲಿ ರಾಜಸ್ತಾನ್‌ ಕರಕುಶಲ ವಸ್ತುಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

KannadaprabhaNewsNetwork |  
Published : May 10, 2025, 01:12 AM IST
ಮಂಗಳೂರಲ್ಲಿ ರಾಜಸ್ತಾನ್‌ ಮೇಳ ಆರಂಭ | Kannada Prabha

ಸಾರಾಂಶ

ರಾಜಸ್ತಾನ ಬೃಹತ್ ಮಾರಾಟ ಮೇಳ ಬುಧವಾರ ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ ಆರಂಭಗೊಂಡಿತು. ಖ್ಯಾತ ಲೇಖಕ ಹಾಗೂ ಸಿನಿಮಾ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಉದ್ಘಾಟನೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರುರಾಜಸ್ತಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ರಾಜಸ್ತಾನ ಬೃಹತ್ ಮಾರಾಟ ಮೇಳ ಬುಧವಾರ ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ ಆರಂಭಗೊಂಡಿತು. ಖ್ಯಾತ ಲೇಖಕ ಹಾಗೂ ಸಿನಿಮಾ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರು ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಖ್ಯಾತ ಚಿತ್ರ ನಿರ್ದೇಶಕ ಹಾಗೂ ನಟ ರಂಗ ತ್ರಿವಿಕ್ರಮ ಬಿರುದಾಂಕಿತ ಸಾಯಿ ಕೃಷ್ಣ ಕುಡ್ಲ ಹಾಗೂ "Miss TeenWorld Super Model Global " ವಿಜೇತೆ ಚಿತ್ರನಟಿ ಕುಮಾರಿ ವೆನ್ಸಿಟಾ ಡೈಸ್ ಇವರು ಮೇಳದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಮೇಳದ ಬಗ್ಗೆ ಮಾಹಿತಿ ನೀಡಿದ ಮೇಳದ ಅಯೋಜಕ ಪ್ರಮೋದ್ ಸಿಂಗ್ ಅವರು, ಈ ಗ್ರಾಮೀಣ ಮೇಳದಲ್ಲಿ ರಾಜಸ್ತಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು, ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ತಾನ್ ಬೆಡ್‌ಶೀಟ್‌ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿರುವುದು ಎಂದು ಹೇಳಿದರು.ಮಾತ್ರವಲ್ಲದೇ ಜೋಧ್‌ಪುರ್‌ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್‌ಪುರ್‌ ಮರದ ಪೀಠೋಪರಣಗಳು, ಹೈದರಾಬಾದ್‌ ಕಪ್ಪು ಮೇಟಲ್‌ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕಾರಿ ಐಟಮ್ಗಳ ಬೃಹತ್ ಸಂಗ್ರಹಗಳಿವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ