ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಎಂ. ಸಮೀವುಲ್ಲಾ ಮಾತನಾಡಿ, ಗಣೇಶೋತ್ಸವಕ್ಕೆ ಅರಸೀಕೆರೆ ನಗರವು ತನ್ನದೇ ಆದ ವಿಶೇಷ ಪರಂಪರೆಯನ್ನು ಹೊಂದಿದೆ. ನಗರದ ಪ್ರಸನ್ನ ಗಣಪತಿ ಸೇರಿದಂತೆ ವಿವಿಧ ಬಡಾವಣೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಗಣಪತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯಿಂದ ಪೂಜಿಸಲಾಗುತ್ತಿದೆ. ಧಾರ್ಮಿಕ ಆಚರಣೆಯ ಜತೆಗೆ ಎಲ್ಲ ಧರ್ಮಗಳ ಜನರು ಒಗ್ಗೂಡಿ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಸಾಮಾಜಿಕ ಸಾಮರಸ್ಯಕ್ಕೆ ಉತ್ತಮ ನಿದರ್ಶನವಾಗಿದೆ ಎಂದರು. ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ವಿವಿಧ ಸಮುದಾಯಗಳ ಜನರನ್ನು ಒಂದೆಡೆ ಸೇರಿಸುವ ಮೂಲಕ ಪರಸ್ಪರ ಬಾಂಧವ್ಯವನ್ನು ವೃದ್ಧಿಸುವ ವೇದಿಕೆಯಾಗಿದೆ ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ಶಾನುಭೋಗರ ಬೀದಿಯಲ್ಲಿ ವಿನಾಯಕ ಭಕ್ತ ಮಂಡಳಿ ಹಾಗೂ ಗೆಳೆಯರ ಬಳಗದ ವತಿಯಿಂದ 45ನೇ ವರ್ಷದ ಗಣೇಶೋತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯುತ್ತಿದ್ದು, ಗಣೇಶೋತ್ಸವದ ಅಂಗವಾಗಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮದೇವತೆಗಳಾದ ಕರಿಯಮ್ಮ ಹಾಗೂ ಮಲ್ಲಿಗೆಮ್ಮ ದೇವಿಯರ ಸನ್ನಿಧಿಯಲ್ಲಿ ಗಣಪತಿಯ ಪೂಜೆಯೊಂದಿಗೆ ಗುರುವಾರ ಲೋಕಕಲ್ಯಾಣಾರ್ಥವಾಗಿ ಗಣಪತಿ ಹೋಮ ಹಾಗೂ ನವಗ್ರಹ ಹೋಮವನ್ನು ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ವಿನಾಯಕ ಭಕ್ತ ಮಂಡಳಿ ಹಾಗೂ ಗೆಳೆಯರ ಬಳಗದ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಎಂ. ಸಮೀವುಲ್ಲಾ ಮಾತನಾಡಿ, ಗಣೇಶೋತ್ಸವಕ್ಕೆ ಅರಸೀಕೆರೆ ನಗರವು ತನ್ನದೇ ಆದ ವಿಶೇಷ ಪರಂಪರೆಯನ್ನು ಹೊಂದಿದೆ. ನಗರದ ಪ್ರಸನ್ನ ಗಣಪತಿ ಸೇರಿದಂತೆ ವಿವಿಧ ಬಡಾವಣೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಗಣಪತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯಿಂದ ಪೂಜಿಸಲಾಗುತ್ತಿದೆ. ಧಾರ್ಮಿಕ ಆಚರಣೆಯ ಜತೆಗೆ ಎಲ್ಲ ಧರ್ಮಗಳ ಜನರು ಒಗ್ಗೂಡಿ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಸಾಮಾಜಿಕ ಸಾಮರಸ್ಯಕ್ಕೆ ಉತ್ತಮ ನಿದರ್ಶನವಾಗಿದೆ ಎಂದರು. ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ವಿವಿಧ ಸಮುದಾಯಗಳ ಜನರನ್ನು ಒಂದೆಡೆ ಸೇರಿಸುವ ಮೂಲಕ ಪರಸ್ಪರ ಬಾಂಧವ್ಯವನ್ನು ವೃದ್ಧಿಸುವ ವೇದಿಕೆಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿನಾಯಕ ಭಕ್ತ ಮಂಡಳಿ ಅಧ್ಯಕ್ಷ ಆಟೋ ನಾಗರಾಜ್, ಕಾರ್ಯದರ್ಶಿ ಸಂತೋಷ್ ಕುಮಾರ್, ಮುಖಂಡರಾದ ರಾಮು, ದಿಲೀಪ್, ಸಂಪತ್ ಕುಮಾರ್, ಚಂದ್ರು, ಅಪ್ಪು, ಮದನ್, ಪವನ್, ಶ್ರೀನಿವಾಸ್, ನವೀನ್, ಚೇತನ್, ನಗರಸಭೆ ಮಾಜಿ ಸದಸ್ಯ ದರ್ಶನ್, ಲೆಕ್ಕ ಪರಿಶೋಧಕ ಶರತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಗಣೇಶೋತ್ಸವದ ಅಂಗವಾಗಿ ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದಾಸೋಹದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.