ಕನ್ನಡಪ್ರಭ ವಾರ್ತೆ ಮಂಗಳೂರು
ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ವಿತರಿಸಿದರು.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳೆರಡಲ್ಲೂ ದ.ಕ. ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದಾರೆ.ಪದವೀಧರ ಕ್ಷೇತ್ರದಲ್ಲಿ 7,075 ಪುರುಷರು ಮತ್ತು 9,793 ಮಹಿಳೆಯರಿದ್ದಾರೆ. 1 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ.
ಕರಡು ಮತದಾರರ ಪಟ್ಟಿ ಪ್ರಕಟವಾದ ನಂತರ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರದಲ್ಲಿ 2,417 ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಈ ಪೈಕಿ 2,318 ಸ್ವೀಕೃತವಾಗಿದ್ದು, 93 ತಿರಸ್ಕೃತಗೊಂಡಿವೆ.
ಶಿಕ್ಷಕರ ಕ್ಷೇತ್ರದಲ್ಲಿ 1,420 ಹಕ್ಕು ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿದ್ದು, ಈ ಪೈಕಿ 1,259 ಸ್ಚೀಕೃತವಾಗಿದ್ದು, 161 ತಿರಸ್ಕೃತಗೊಂಡಿವೆ. ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.