ಕನ್ನಡಪ್ರಭ ವಾರ್ತೆ ಉಡುಪಿ
ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಸಹಮಿಲನವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನ ಸ್ಪರ್ಧಾರ್ತಕ ಜಗತ್ತಿನಲ್ಲಿ ನಾಯಕನ ಆಲೋಚನೆಗಳು ಸಮಾಜದಲ್ಲಿ ಬದಲಾವಣೆಯನ್ನು ಬಯಸುವಂತದ್ದಾಗಿರಬೇಕಾಗಿದ್ದು, ಹೊಸ ಹೊಸ ಪ್ರಯೋಗಗಳು ಮತ್ತು ಆಲೋಚನೆಗಳೊಂದಿಗೆ ಸಂಘಟನೆಯನ್ನು ಮುನ್ನಡೆಸಬೇಕಾಗಿದೆ. ಈ ವೇಳೆ ಬರುವ ಟೀಕೆಗಳನ್ನು ಧನಾತ್ಮಕವಾಗಿ ಸ್ವೀಕರಿಸಿದಾಗ ಉತ್ತಮ ನಾಯಕತ್ವ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಣ್ಯ ಸಂರಕ್ಷಾಣಾಧಿಕಾರಿ ಕ್ಲಿಫರ್ಡ್ ಲೋಬೊ ಮಾತನಾಡಿ, ಕ್ರೈಸ್ತ ಸಮುದಾಯ ಸೇವೆಯಲ್ಲಿ ಪ್ರಥಮ ಸ್ಥಾನದಲ್ಲಿದ್ದು ಕೇವಲ ಸೇವೆ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಯುವಕರು ಸರ್ಕಾರಿ ಸೇವೆಗಳತ್ತ ಗಮನ ಹರಿಸಬೇಕು ಎಂಬ ಸಲಹೆ ನೀಡಿದರು.ಸಭೆಯಲ್ಲಿ 2023-24ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಓಲಿವಿಯಾ ಡಿಮೆಲ್ಲೊ ಮಂಡಿಸಿದರೆ, ಲೆಕ್ಕಪತ್ರವನ್ನು ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಮಂಡಿಸಿದರು. ಮಾನಸ ಸಂಸ್ಥೆಯ ವರದಿಯನ್ನು ಅಧ್ಯಕ್ಷ ಹೆನ್ರಿ ಮಿನೇಜಸ್, ಸಶಕ್ತ ಸಮುದಾಯ ಸೇವಾ ಟ್ರಸ್ಟಿನ ವರದಿಯನ್ನು ಕಾರ್ಯದರ್ಶಿ ಆಲಿಸ್ ರೊಡ್ರಿಗಸ್ ಮಂಡಿಸಿದರು.
ನಿಯೋಜಿತ ಅಧ್ಯಕ್ಷ ರೊನಾಲ್ಡ್ ಆಲ್ಮೇಡಾ ಸ್ವಾಗತಿಸಿದರು. ಕಾರ್ಯದರ್ಶಿ ಓಲಿವಿಯಾ ಡಿಮೆಲ್ಲೊ ವಂದಿಸಿದರು. ಹರ್ಷಿತ್ ಫರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.