ನಾನು ಸಂಗೀತದ ಶಿಕ್ಷಣ ಪಡೆದವನಲ್ಲ. ಸಂಗೀತದ ಪಯಣದಲ್ಲಿ ಹಂತಹಂತವಾಗಿ ಕಲಿಯುತ್ತಾ ಬಂದವನು. ನಾನು ಗಾಯಕ ಆಗಲು ಹೋದೆ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತು. ಮುಂದೆ ಬದುಕು ಅರಿಸಿ ಬೆಂಗಳೂರಿಗೆ ಬಂದಾಗ ವಿ.ಮನೋಹರ್, ಉಪೇಂದ್ರ ಮುಂತಾದವರು ಗೆಳೆಯರಾದರು. ನನ್ನೊಳಗಿನ ಸಂಗೀತಗಾರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು ಎಂದು ಗುರುಕಿರಣ್ ಹೇಳಿದರು.
ಕನ್ನಡಪ್ರಭ ವಾರ್ತೆ ಮಂಗಳೂರುವೈದ್ಯನಾಗಬೇಕೆಂದು ಹೆತ್ತವರು ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಿಸಿದ್ದರು. ವೈದ್ಯಕೀಯ ಕಾಲೇಜುಆರಂಭಕ್ಕೆ ಸ್ವಲ್ಪ ಸಮಯವಿದೆ ಎಂದು ಸಮಯ ಕಳೆಯಲು ಮಂಗಳೂರಿನ ಸರ್ಕಾರಿ ಕಾಲೇಜಿಗೆ ಸೇರಿದೆ. ಅಲ್ಲಿ ಕಲಾ ಕ್ಷೇತ್ರ ಆಕರ್ಷಿಸಿತು. ಹಾಡುಗಾರನಾದೆ, ನಟನಾದೆ, ಸಂಗೀತ ನಿರ್ದೇಶಕನಾದೆ. ಸಂಗೀತದ ಆಕರ್ಷಣೆಯಿಂದ ಬದುಕೇ ಬದಲಾಯಿತು ಎಂದು ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ತಮ್ಮ ಸಾಧನೆಯ ಹಾದಿಯನ್ನು ತೆರೆದಿಟ್ಟರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಮ್ಮ ಬದುಕನ್ನು ನಾವೇ ವಿನ್ಯಾಸಗೊಳಿಸಬೇಕು. ಕನಸು ಕಟ್ಟುವ ಬದಲು ಇಷ್ಟವಾದ ಕೆಲಸವನ್ನು ಮಾಡುತ್ತಾ ಹೋಗಬೇಕು. ಸಂಗೀತವೇ ನನ್ನ ಮನಸ್ಸಿಗೆ ಖುಷಿ ನೀಡುವ ಕೆಲಸ. ಅದನ್ನು ನಿಷ್ಠೆಯಿಂದ ಮಾಡಿದ ಕಾರಣ ಯಶಸ್ಸು ಸಾಧ್ಯವಾಯಿತು ಎಂದರು. ನಾನು ಸಂಗೀತದ ಶಿಕ್ಷಣ ಪಡೆದವನಲ್ಲ. ಸಂಗೀತದ ಪಯಣದಲ್ಲಿ ಹಂತಹಂತವಾಗಿ ಕಲಿಯುತ್ತಾ ಬಂದವನು. ನಾನು ಗಾಯಕ ಆಗಲು ಹೋದೆ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಕ್ಕಿತು. ಮುಂದೆ ಬದುಕು ಅರಿಸಿ ಬೆಂಗಳೂರಿಗೆ ಬಂದಾಗ ವಿ.ಮನೋಹರ್, ಉಪೇಂದ್ರ ಮುಂತಾದವರು ಗೆಳೆಯರಾದರು. ನನ್ನೊಳಗಿನ ಸಂಗೀತಗಾರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು ಎಂದು ಗುರುಕಿರಣ್ ಹೇಳಿದರು.ಹಿರಿಯ ಛಾಯಾಗ್ರಾಹಕ ಯಜ್ಞ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಇದ್ದರು.
ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ನಿರೂಪಿಸಿದರು. ಖಜಾಂಜಿ ಪುಷ್ಪರಾಜ್ ಬಿ. ಎನ್. ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.