ಕೊಂಚ ತಗ್ಗಿದ ಮಳೆ: ಮನೆ ಗೋಡೆ ಕುಸಿದು ಹಾನಿ

KannadaprabhaNewsNetwork |  
Published : Jul 18, 2024, 01:35 AM IST
೧೭ಬಿಹೆಚ್‌ಆರ್ ೧: ಬಾಳೆಹೊನ್ನೂರಿನ ರಂಭಾಪುರಿ ಮಠ ರಸ್ತೆಯ ರೇಣುಕನಗರದ ಸುರೇಂದ್ರ ಕಿಣಿ ಎಂಬುವರ ಮನೆಯ ಗೋಡೆ ಮಳೆಗೆ ಕುಸಿದು ಹಾನಿಯಾಗಿರುವುದು. | Kannada Prabha

ಸಾರಾಂಶ

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆ ಅಬ್ಬರ ಬುಧವಾರ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆ ಅಬ್ಬರ ಬುಧವಾರ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಮಂಗಳವಾರ ಧಾರಾಕಾರ ಸುರಿದ ಮಳೆಗೆ ರಂಭಾಪುರಿ ಮಠ ರಸ್ತೆಯ ರೇಣುಕನಗರದ ಸುರೇಂದ್ರ ಕಿಣಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಮನೆಗೆ ಹಾನಿಯಾಗಿದೆ. ಆದರೆ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಾಡ ಕಚೇರಿ ವಿಎ ಸಮೀಕ್ಷಾ, ಬಿ.ಕಣಬೂರು ಗ್ರಾಪಂ ಪಿಡಿಒ ಕಾಶಪ್ಪ ಭೇಟಿ ನೀಡಿ ಪರಿಶೀಲಿಸಿದರು.ಸಮೀಪದ ಆಡುವಳ್ಳಿ ಗ್ರಾಪಂ ವ್ಯಾಪ್ತಿಯ ಮೇಗರಮಕ್ಕಿ ಕಿಚ್ಚಬ್ಬಿ ಸುಭಾಶ್ ಎಂಬುವರ ಮನೆ ಸಮೀಪದ ಧರೆ ಕುಸಿತಗೊಂಡು ಹಾನಿಯಾಗಿದ್ದು, ಮನೆಗೂ ಹಾನಿಯಾಗುವ ಆತಂಕ ಎದುರಾಗಿದೆ. ಸ್ಥಳಕ್ಕೆ ಆಡುವಳ್ಳಿ ಗ್ರಾಪಂ ಪಿಡಿಒ, ಗ್ರಾಮಲೆಕ್ಕಿಗರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಬುಧವಾರ ಬೆಳಗ್ಗಿನಿಂದ ಪುನರ್ವಸು ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ದು, ಭದ್ರಾನದಿಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ನೀರಿನ ಪ್ರಮಾಣದಲ್ಲಿಯೂ ಸ್ವಲ್ಪ ಇಳಿಕೆಯಾಗಿದೆ. ಕೆಲವು ಗ್ರಾಮಗಳಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗಾಳಿ ಮಳೆಗೆ ವಿದ್ಯುತ್ ವ್ಯತ್ಯಯವಾಗಿದ್ದು, ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.ಕಳೆದ ಎರಡ್ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜನ ಓಡಾಟ ಕಡಿಮೆಯಾಗಿದ್ದು, ವ್ಯಾಪಾರ ವಹಿವಾಟು ಸಹ ಕುಂಠಿತಗೊಂಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ