ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿ ದಿಢೀರ್ ಭೇಟಿ

KannadaprabhaNewsNetwork |  
Published : Jun 26, 2024, 12:39 AM IST
ಪೋಟೊ: 25ಎಸ್‌ಎಂಜಿಕೆಪಿ07ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್‌. ಮಂಜುನಾಥ ಚೌದರಿ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲೂಕಿನ ಹಿರಿಯ ಉಪ ನೋಂದಣಾಧಿಕಾರಿ ಕಚೇರಿಗೆ ಮಂಗಳವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್‌. ಮಂಜುನಾಥ ಚೌದರಿ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲೂಕಿನ ಹಿರಿಯ ಉಪ ನೋಂದಣಾಧಿಕಾರಿ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ: ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್‌. ಮಂಜುನಾಥ ಚೌದರಿ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲೂಕಿನ ಹಿರಿಯ ಉಪ ನೋಂದಣಾಧಿಕಾರಿ ಕಚೇರಿಗೆ ಮಂಗಳವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆ ಡಿಎಸ್‍ಪಿ ಉಮೇಶ್ ಈಶ್ವರನಾಯ್ಕ, ಪೊಲೀಸ್ ನಿರೀಕ್ಷಕ ಪ್ರಕಾಶ್ ಮತ್ತು ಸಿಬ್ಬಂದಿಯೊಂದಿಗೆ ಹಿರಿಯ ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದ ಅವರು, ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಮತ್ತು ಹೊರ ಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್‌ಗಳ ಬಗ್ಗೆ ಮಾಹಿತಿ ಪಡೆದರು.

ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ ಪರಿಶೀಲನೆ ಮಾಡಿದ ಅವರು, ನೋಂದಣಿ ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಕೆಲ ನ್ಯೂನ್ಯತೆಗಳ ಬಗ್ಗೆ ಮಾಹಿತಿ ಪಡೆದು ಸರಿಪಡಿಸುವಂತೆ ಹಿರಿಯ ಉಪನೋಂದಣಾಧಿಕಾರಿ ಧನರಾಜ್ ಮತ್ತು ದಿನೇಶ್ ಅವರಿಗೆ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ