ದಾಬಸ್‍ಪೇಟೆ: ಕಿತ್ತಲೆ ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಬುಲೇರೋ ವಾಹನ ಅಡ್ಡ ಬಂದ ಪರಿಣಾಮ ಲಾರಿ ಪಲ್ಟಿಯಾಗಿ ಕಿತ್ತಲೆ ಹಣ್ಣು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲೆಲ್ಲಾ ಬಿದ್ದ ಘಟನೆ ಸೋಂಪುರ ಹೋಬಳಿಯ ಕೆಂಗಲ್ ಕೆಂಪೋಹಳ್ಳಿಯ ರಾಷ್ಟ್ರೀಯ ಹೆದ್ದಾರಿ-48ರ ತುಮಕೂರು-ಬೆಂಗಳೂರು ರಸ್ತೆಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸರ್ವೀಸ್ ರಸ್ತೆಯಲ್ಲಿ ವಾಹನಗಳು ಚಲಿಸುತ್ತಿದ್ದು, ಸರ್ವೀಸ್ ರಸ್ತೆಯನ್ನು ಗುಣಮಟ್ಟದಿಂದ ಮಾಡದ ಪರಿಣಾಮ ರಸ್ತೆ ಗುಂಡಿಗಳು ಬಿದ್ದಿವೆ. ಬೊಲೇರೋ ವಾಹನ ಗುಂಡಿ ತಪ್ಪಿಸಿಕೊಳ್ಳಲು ಹೋದ ಪರಿಣಾಮ ಲಾರಿ ಪಲ್ಟಿಯಾಗಿದೆ.
ರಸ್ತೆಯಲ್ಲಾ ಕಿತ್ತಲೆಹಣ್ಣು:ಲಾರಿ ಪಲ್ಟಿಯಾಗುತ್ತಿದ್ದಂತೆ ಲಾರಿಯಲ್ಲಿದ್ದ ಕಿತ್ತಲೆ ಹಣ್ಣು ರಸ್ತೆಯಲ್ಲೆಲ್ಲಾ ಚಿಲ್ಲಾಪಿಲ್ಲಿಯಾಗಿದ್ದವು. ಬೆಳಿಗ್ಗೆ 6 ಗಂಟೆ ಬಳಿಕ ಮಾಲೀಕರು ಲಾರಿಯಲ್ಲಿದ್ದ ಕಿತ್ತಳೆ ಹಣ್ಣು ಬೇರೆ ವಾಹನಕ್ಕೆ ಸ್ಥಳಾಂತರ ಮಾಡಿಸಿ ತೆಗೆದುಕೊಂಡು ಹೋದರು. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.