ದೆಹಲಿಯಲ್ಲಿ ಅರಳಿದ ಕಮಲ: ಕಾರವಾರದಲ್ಲಿ ಬಿಜೆಪಿ ವಿಜಯೋತ್ಸವ

KannadaprabhaNewsNetwork |  
Published : Feb 09, 2025, 01:17 AM IST
ಕಾರವಾರದಲ್ಲಿ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಯಿತು. | Kannada Prabha

ಸಾರಾಂಶ

ಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೆಹಲಿ ಮತದಾರರಿಗೆ ಜೈಕಾರ ಹಾಕಲಾಯಿತು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಕಾರ್ಯಕರ್ತರು ಸಂಭ್ರಮಿಸಿದರು.

ಕಾರವಾರ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ನಗರದ ಸವಿತಾ ಸರ್ಕಲ್‌ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಎಲ್ಲ ನಾಯಕರು, ಕಾರ್ಯಕರ್ತರು, ಬೇರೆ ಬೇರೆ ರಾಜ್ಯಗಳಿಂದ ಹೋಗಿ ಪ್ರಚಾರ ನಡೆಸಿದವರಿಗೆ ಹಾಗೂ ದೆಹಲಿಯ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಜನತೆಗೆ ಮೋಸ ಮಾಡಿ ಅಧಿಕಾರಕ್ಕೆ ಬಂದವರಿಗೆ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಪ್ರಧಾನಿ ಮೋದಿ ಯೋಚನೆಗಳನ್ನು ಮಾಡಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವುದರ ಪ್ರಯೋಜನ ರಾಷ್ಟ್ರದ ಹಳ್ಳಿ ಹಳ್ಳಿಯಲ್ಲೂ ಆಗುತ್ತಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಕರ್ತರು ಮನೆ ಮನೆಗೂ ತಲುಪಿಸಬೇಕು ಎಂದು ವಿನಂತಿಸಿದರು.ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ದೆಹಲಿ ಮತದಾರರಿಗೆ ಜೈಕಾರ ಹಾಕಲಾಯಿತು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ, ಕಾರ್ಯಕರ್ತರು ಸಂಭ್ರಮಿಸಿದರು.

ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ, ನಗರ ಪ್ರಧಾನ ಕಾರ್ಯದರ್ಶಿ ದೇವದಾಸ, ಮುಖಂಡರಾದ ಸುನಿಲ್ ಸೋನಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ಅಶೋಕ್ ಗೌಡ, ಮಹಿಳಾ ಮೋರ್ಚಾದ ವೈಶಾಲಿ ತಾಂಡೇಲ್, ಕಲ್ಪನಾ ನಾಯ್ಕ, ಪರ್ಬತ್ ನಾಯ್ಕ, ನಗರ ಹಿಂದುಳಿದ ವರ್ಗದ ಅಧ್ಯಕ್ಷರಾದ ದೇವದಾಸ ನಾಯ್ಕ ಮೊದಲಾದವರು ಇದ್ದರು.ಭಟ್ಕಳದಲ್ಲೂ ಬಿಜೆಪಿಯಿಂದ ವಿಜಯೋತ್ಸವ

ಭಟ್ಕಳ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಬಿಜೆಪಿ ಮಂಡಲದಿಂದ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ದೆಹಲಿಯಲ್ಲಿ ಬಿಜೆಪಿ ಸರ್ಕಾರ 27 ವರ್ಷಗಳ ನಂತರ ಅಧಿಕಾರಕ್ಕೆ ಬರುತ್ತಿದೆ. ಭ್ರಷ್ಟಾಚಾರ ನಿರ್ಮೂಲನೆಯ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಾರ್ಟಿಗೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಸೋಲಿಸಿದ್ದಾರೆ ಎಂದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ವಿಶ್ವಾಸದಿಂದ ದೆಹಲಿಯ ಜನರು ಬಿಜೆಪಿಯನ್ನು 27 ವರ್ಷಗಳ ಬಳಿಕ ಅಧಿಕಾರಕ್ಕೆ ತಂದಿದ್ದಾರೆ. ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದಕ್ಕೆ ರೋಸಿ ಹೋದ ದೆಹಲಿಯ ಜನತೆ ಬಿಜೆಪಿಗೆ ಅಭೂತಪೂರ್ವ ಗೆಲುವು ತಂದು ಕೊಟ್ಟಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಖಾತೆ ತೆರೆಯಲು ಕೂಡ ವಿಫಲವಾಗಿದೆ ಎಂದರು.

ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ ಎನ್. ನಾಯ್ಕ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಪಕ್ಷಕ್ಕೆ ಖುಷಿ ತಂದಿದೆ. ದೆಹಲಿ ಸರ್ಕಾರದ ಮಿತಿ ಮೀರಿದ ಭ್ರಷ್ಟಾಚಾರದಿಂದ ಜನರು ಬೇಸರ ವ್ಯಕ್ತಪಡಿಸಿದ್ದರು.ಕರ್ನಾಟಕದಕ್ಕೂ ಜನರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ವಿತ ಎಂದರು. ಪ್ರಮುಖರಾದ ರಾಜೇಶ ನಾಯ್ಕ, ದಿನೇಶ ನಾಯ್ಕ, ಭಾಸ್ಕರ ದೈಮನೆ, ಮೋಹನ ನಾಯ್ಕ ಮುಂತಾದವರಿದ್ದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ