ಪಡುಬಿದ್ರಿ: ಇಲಿ ಪಾಷಾಣದಿಂದ ಹಲ್ಲುಜ್ಜಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಇನ್ನಾ ಗ್ರಾಮದಲ್ಲಿ ನಡೆದಿದೆ. ಮೃತರು ವೆಂಕಪ್ಪ (53) ನ.1ರಂದು ಬೆಳಗ್ಗೆ ಬಚ್ಚಲು ಮನೆಗೆ ಹೋಗಿ ಟೂತ್‌ಪೇಸ್ಟ್ ಎಂದು ಅಲ್ಲಿಯೇ ಇದ್ದ ಇಲಿ ಪಾಷಾಣವನ್ನು ತಿಳಿಯದೇ ಬಳಸಿದ್ದು, ಅವರು ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ದ.ಕ. ಜಿಲ್ಲೆಯ ಮುಕ್ಕಾ ಶ್ರೀನಿವಾಸ ಆಸ್ಪತ್ರೆಗೆ ಕದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ 5.30ಕ್ಕೆ ಮೃತಪಟ್ಟಿದ್ದಾರೆ. ಮೃತರ ಮಗ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.