ಮನುಷ್ಯ ತನ್ನ ಜೀವನಶೈಲಿ ಬದಲಿಸಬೇಕು

KannadaprabhaNewsNetwork |  
Published : Aug 26, 2025, 01:03 AM IST
25ಎಚ್ಎಸ್ಎನ್3 :  | Kannada Prabha

ಸಾರಾಂಶ

ಮನುಷ್ಯನು ತನ್ನ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಹಾಗೂ ಉತ್ತಮ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಛೇರ್‍ಮನ್ ಭರತ್ ಕುಮಾರ್ ಎಚ್. ಜಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ರೆಡ್‌ಕ್ರಾಸ್ ಸಂಸ್ಥೆಯು ಗ್ರಾಮೀಣ ಭಾಗದ ಸಾರ್ವಜನಿಕ ವಲಯದಲ್ಲಿ ಆರೋಗ್ಯಕ್ಕೆ ಅತೀ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದಾಗಿ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಉದ್ದೇಶವನ್ನು ಹೊಂದಿರುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮನುಷ್ಯನು ತನ್ನ ಜೀವನಶೈಲಿಯನ್ನು ಬದಲಾಯಿಸಿಕೊಳ್ಳಬೇಕು ಹಾಗೂ ಉತ್ತಮ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಛೇರ್‍ಮನ್ ಭರತ್ ಕುಮಾರ್ ಎಚ್. ಜಿ ತಿಳಿಸಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಇವರ ವತಿಯಿಂದ ಜಿನೀವಾ ಒಪ್ಪಂದದ ದಿನಾಚರಣೆ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿ ಆವರಣದಲ್ಲಿ ನಾರಾಯಣ ಆಸ್ಪತ್ರೆ, ಮೈಸೂರು ಇವರ ಸಹಯೋಗದೊಂದಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ವೇಳೆ ಭರತ್ ಕುಮಾರ್ ಎಚ್. ಜಿ ಮಾತನಾಡಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ದೇಶದಲ್ಲಿ ತನ್ನ ಸೇವೆಯನ್ನು ಪ್ರಾರಂಭಿಸಲು ಕಾರಣ ಹಾಗೂ ಸಂಸ್ಥಾಪಕರ ವಿವರ ಮತ್ತು ಈ ಸಂಸ್ಥೆಯು ಮಾಡುತ್ತಿರುವ ಸಮಾಜ ಸೇವೆ ಬಗ್ಗೆ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿದರು ಮತ್ತು ರೆಡ್‌ಕ್ರಾಸ್ ಸಂಸ್ಥೆಯ ಮೈಲಿಗಲ್ಲು ಆಗಿರುವ ಜಿನೀವಾ ಒಪ್ಪಂದ ಮಾಡಿಕೊಳ್ಳಲು ಮುಖ್ಯ ಕಾರಣ ಹಾಗೂ ಇದರ ಉದ್ದೇಶವನ್ನು ಸವಿಸ್ತಾರವಾಗಿ ಮಾಹಿತಿ ನೀಡಿದರು. ವಾಸ್ತವಿಕವಾಗಿ ಇಂದು ಅತಿ ಹೆಚ್ಚು ಒತ್ತಡದ ಜೀವನವನ್ನು ನಡೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನು ಆರೋಗ್ಯದ ಬಗ್ಗೆ ಗಮನಹರಿಸುವುದು ಕಡಿಮೆಯಾಗಿದೆ.

ಈ ಸಂದರ್ಭದಲ್ಲಿ ತಾಲೂಕು ರೆಡ್‌ಕ್ರಾಸ್ ಸಂಸ್ಥೆಯು ಗ್ರಾಮೀಣ ಭಾಗದ ಸಾರ್ವಜನಿಕ ವಲಯದಲ್ಲಿ ಆರೋಗ್ಯಕ್ಕೆ ಅತೀ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಿರುವುದಾಗಿ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಉದ್ದೇಶವನ್ನು ಹೊಂದಿರುವುದಾಗಿ ತಿಳಿಸಿದರು.ಚಾ.ವಿ.ಸ.ನಿ.ನಿ ಮುಖ್ಯ ಅಧಿಕಾರಿ ರತ್ನ ಮಾತನಾಡಿ, ನಮ್ಮ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಯಲ್ಲಿ ಇಂದು ಆರೋಗ್ಯ ಶಿಬಿರವನ್ನು ರೆಡ್‌ಕ್ರಾಸ್ ಸಂಸ್ಥೆಯ ಚನ್ನರಾಯಪಟ್ಟಣ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಸಿಬ್ಬಂದಿಗಳು ಹಾಗೂ ಸಿಬ್ಬಂದಿ ಕುಟುಂಬ ವರ್ಗದವರು ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಹಾಗೂ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸುಮಾರು ೨೧೩ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು ಹಾಗೂ ೩೫ ಸಿಬ್ಬಂದಿಗಳು ರಕ್ತದಾನ ಮಾಡಿದರು.

ಕಾರ್ಯಕ್ರಮದ ಉಪಸ್ಥಿತಿಯಲ್ಲಿ ಮೈಸೂರು ನಾರಾಯಣ ಆಸ್ಪತ್ರೆ ಡಾ.ಗುಲ್ಜರ್‌, ಮೈಸೂರಿನ ನಾರಾಯಣ ಆಸ್ಪತ್ರೆಯ ಡಾ. ಮಾನಸ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕದ ಕಾರ್ಯದರ್ಶಿ ಸಿ. ಎನ್. ಜಬಿವುಲ್ಲಾ ಬೇಗ್ ಮತ್ತಿತರಿದ್ದರು.

ಉದಯ್ ಶಂಕರ್ ನಿರ್ದೇಶಕರು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಹೋಬಳಿ ಹಾಗೂ ತಾಲೂಕಿನ ಎಲ್ಲಾ ಸಿಬ್ಬಂದಿ ಹಾಜರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ