ಕನ್ನಡಪ್ರಭ ವಾರ್ತೆ ಪಾಂಡವಪುರ
ಹಣ, ಆಸ್ತಿ ಸಂಪಾದನೆಗಿಂತ ಮನುಷ್ಯನಿಗೆ ಉತ್ತಮ ಆರೋಗ್ಯ ಹೊಂದುವುದೇ ದೊಡ್ಡಭಾಗ್ಯ ಎಂದು ಪಟ್ಟಣದ ಸಾರ್ವಜನಿಕ ಉಪವಿಭಾಗಿಯ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ಕಿವಿಮಾತು ಹೇಳಿದರು.ತಾಲೂಕಿನ ಹಾಗನಹಳ್ಳಿಯಲ್ಲಿ ಪ್ರಗತಿ ಸೇವಾ ಟ್ರಸ್ಟ್ ಪಾಂಡವಪುರ ಹಾಗೂ ಅಮ್ಮನ ಆಸರೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಡಾ.ನಾಗೇಶ್ ರಾಗಿಮುದ್ದನಹಳ್ಳಿ ಅವರ ಜನ್ಮದಿನದ ಅಂಗವಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಸಾಧನ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರೋಗ್ಯವಂತರು ದೇಶದಲ್ಲಿ ಸಾಧನೆ ಮಾಡಲು ಸಾಧ್ಯ. ಪ್ರತಿಯೊಬ್ಬರಿಗೂ ಈ ಸತ್ಯ ಅರಿತು ಉತ್ತಮ ಆರೋಗ್ಯದೊಂದಿಗೆ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಂಕಲ್ಪ ಮಾಡಿಬೇಕಿದೆ ಎಂದರು.ಪರಿಸರ ಸಂರಕ್ಷಣೆಯಲ್ಲಿನ ವೈಫಲ್ಯದಿಂದ ಇಂದು ಸೊಳ್ಳೆ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಮನೆ ಮತ್ತು ಶಾಲೆ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಪರಿಸರ ಸ್ವಚ್ಛವಾಗಿದ್ದರೆ ಯಾವುದೇ ಕಾಯಿಲೆ ಬರುವುದಿಲ್ಲ ಎಂದರು.
ನಾಗೇಶ್ ರಾಗಿಮುದ್ದನಹಳ್ಳಿ ಅವರು ಪ್ರತಿವರ್ಷ ತಮ್ಮ ಜನ್ಮದಿನದಂದು ಸಸಿನೆಟ್ಟು ರಕ್ಷಣೆ ಮಾಡುವುದು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ಶ್ಲಾಘನೀಯ. ಸಮಾಜಕ್ಕೆ ಇವರ ಸೇವೆ ಅನನ್ಯವಾಗಿದೆ ಎಂದರು.ಎಂ.ಎಚ್.ವಿಜಯಕುಮಾರ್ ಮಾತನಾಡಿ, ಸಮಾಜಮುಖಿ ಕಾರ್ಯಕ್ರಮ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಿಸಬೇಕಿದೆ. ಮಕ್ಕಳಿಗೆ ಉತ್ತಮ ಬಾಂಧವ್ಯದ ಮಹತ್ವ ಮತ್ತು ಸಂಸ್ಕಾರಗಳನ್ನು ಪೋಷಕಕರು ಕಲಿಸಬೇಕಿದೆ ಎಂದರು.
ಮಾಧ್ಯಮ ಕ್ಷೇತ್ರ ರಚಿತ ಕಾರ್ಯಪ್ಪ, ಬಿ.ಎನ್.ಪ್ರಸನ್ನ ಕುಮಾರ್, ಎಸ್.ಜೆಕುಮಾರ್. ಅಮೀತ್, ಕೃಷ್ಣೇಗೌಡ ಅವರಿಗೆ ಸನ್ಮಾನಿಸಿ ಸಾಧನ ಸಾಹಿತ್ಯ ಪ್ರಶಸ್ತಿ ನೀಡಲಾಯಿತು. ಈ ವೇಳೆ ಡಾ.ಮಾರುತಿ ಮತ್ತು ಆಶ್ರಮದ ಪ್ರಭುಸ್ವಾಮಿ, ಕಾರ್ಯದರ್ಶಿ ಪುಪ್ಪವತಿ, ಚಿನಕುರಳಿ ವೈದ್ಯಾಧಿಕಾರಿ ಡಾ.ಸಂದೀಪ್, ಡಾ.ಬಿ.ಸಿ.ವಿಜಯಕುಮಾರ್, ಪದ್ಮಾವತಿ ಬೆಟ್ಟಯ್ಯ. ಕಾರ್ಯದರ್ಶಿ ಚಿಕ್ಕಲಿಂಗಸ್ವಾಮಿ ಇದ್ದರು.