ಹುಬ್ಬಳ್ಳಿ: ತಲವಾರ್ ಹಿಡಿದು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಇಲ್ಲಿನ ಕಸಬಾಪೇಟ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ನಗರದ ನೂರಾನಿ ಪ್ಲಾಟ್‌ನ ಸೈಫ್ ಬಿಜಾಪುರ ಎಂಬುವವನು ಇಲ್ಲಿನ ಹಳೇ ಹುಬ್ಬಳ್ಳಿಯ ಸೂಂಡಕೆ ಹಾಲ್ ಹತ್ತಿರ ತಲವಾರ್ ಹಿಡಿದು ಅಲೆದಾಡುತ್ತಿದ್ದ. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪಿಎಸ್‌ಐ ರವಿ ವಡ್ಡರ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.