ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿ, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ 25000ಕ್ಕೂ ಹೆಚ್ಚಿನ ಫಲಾನುಭವಿಗಳು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಮಧ್ಯಾಹ್ನದ ಊಟ, ಕುಡಿವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಯಾವುದೇ ನ್ಯೂನತೆಗಳುಂಟಾಗದಂತೆ ವಿಶೇಷ ಗಮನಹರಿಸಲು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸಲಾಗುವುದು. ಅಲ್ಲದೇ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮ ಪಂಚಾಯಿತಿಗಳಿಂದ ಜನರನ್ನು ಕರೆತರಲು ಹಾಗೂ ಅವರ ಸ್ಥಳಕ್ಕೆ ಬಿಟ್ಟು ಬರಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು.ಇದೇ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗಿರುವವ ಅನುಕೂಲಕ್ಕಾಗಿ ಸ್ಥಳದಲ್ಲಿಯೇ ಹೆಸರನ್ನು ನೋಂದಾಯಿಸಿಕೊಂಡು ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುವಂತೆ ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ಹಲವು ಕೌಂಟರ್‌ಗಳನ್ನು ತೆರೆಯಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳಲ್ಲಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲು ಕ್ರಮವಹಿಸಲಾಗುವುದು. ಅಲ್ಲದೇ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿ ಸರ್ಕಾರದ ಸಚಿವರು, ನಿಗಮ ಮಂಡಳಿಗಳ ಅಧ್ಯಕ್ಷರು, ವಿಧಾನಪರಿಷತ್ ಮತ್ತು ವಿಧಾನಸಭಾ ಶಾಸಕರು, ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.