ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಬಿಜೆಪಿ ಮುಖಂಡರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕ್ಷೇತ್ರ ವ್ಯಾಪ್ತಿಯ ಎರಡು ಪಕ್ಷಗಳ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.
ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕ ಎಚ್.ಟಿ.ಮಂಜು, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಟಿ.ಶ್ರೀಕಂಠೇಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಸೇರಿದಂತೆ ರಾಜ್ಯದ ಅನೇಕ ನಾಯಕರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.ಜಿಲ್ಲೆಯ ರೈತರು, ಕಾವೇರಿ ಉಳಿವು ಹಾಗೂ ಸಮಗ್ರ ಅಭಿವೃದ್ಧಿಗಾಗಿ ಜನರು ಮತ್ತು ನಾಯಕರ ಒತ್ತಾಯದಂತೆ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಎರಡು ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಎಚ್ಚಡಿಕೆ ಗೆಲುವಿಗೆ ಒಗ್ಗೂಡಿ ಪ್ರಚಾರ ನಡೆಸುತ್ತಿದ್ದೇವೆ ಎಂದರು.
ಪ್ರಧಾನಿ ಮೋದಿ ಅವರ ಸಚಿವ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಲಿದ್ದಾರೆ. ಜಿಲ್ಲೆಯ ಇದರಿಂದ ಅಭಿವೃದ್ಧಿಯಾಗಲಿದೆ. ಸಮಾವೇಶದಲ್ಲಿ ತಾಲೂಕಿನ ಎಲ್ಲ ಗ್ರಾಮಗಳ ಎರಡು ಪಕ್ಷಗಳ ಸ್ಥಳೀಯ ಮುಖಂಡರು ಹಾಗೂ ಸಾವಿರಾರು ಮಂದಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ ಎಚ್.ಡಿ.ಕುಮಾರಸ್ವಾಮಿ ಅವರ ಕೈಬಲಪಡಿಸಬೇಕು ಎಂದು ಮನವಿ ಮಾಡಿದರು.
ರಾಜಕೀಯ ಉದ್ದೇಶಕ್ಕಾಗಿ ಎಚ್ಡಿಕೆ ಹೇಳಿಕೆ ತಿರುಚಿ ಕಾಂಗ್ರೆಸ್ ಅಪಪ್ರಚಾರ: ಡಾ.ಕೆ.ಅನ್ನದಾನಿ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಣ್ಣು ಮಕ್ಕಳ ಬಗ್ಗೆ ಅಪಾರ ಗೌರವಿಟ್ಟುಕೊಂಡಿದ್ದಾರೆ. ಗ್ಯಾರಂಟಿ ಯೋಜನೆ ಟೀಕಿಸಿ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ, ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ನವರು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ಕಿಡಿಕಾರಿದರು.
ಅಪಪ್ರಚಾರಕ್ಕೆ ಮುನಿರಾಜು ಕಿಡಿ:
ಇನ್ನೊಬ್ಬರ ಹಣಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ. ನಂಬಿಕೆ ದ್ರೋಹದ ಕೆಲಸ ಮಾಡುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಇಂತಹ ಅಪಪ್ರಚಾರ ಹಾಗೂ ಜೆಡಿಎಸ್-ಬಿಜೆಪಿ ಯಡವಟ್ಟಿನಿಂದ ನಮ್ಮ ಎದುರಾಳಿಗೆ ಅಷ್ಟೊಂದು ದೊಡ್ಡ ಅಂತರದಿಂದ ಗೆಲುವು ಸಿಕ್ಕಿದ್ದು ಎಂದು ಬೇಸರ ವ್ಯಕ್ತಪಡಿಸಿದರು.