ಕನ್ನಡಪ್ರಭ ವಾರ್ತೆ ಶಿರಾ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ.ಜಯಚಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಜು. 28 ರ ಭಾನುವಾರದಂದು ನಗರದ ಅಕ್ಷರ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ತಿಳಿಸಿದರು.
ಮುಖಂಡ ಗುಳಿಗೇನಹಳ್ಳಿ ನಾಗರಾಜ್ ಮಾತನಾಡಿ, ಶಿರಾ ಕ್ಷೇತ್ರದ ಶಾಸಕರಾದ ಟಿ.ಬಿ.ಜಯಚಂದ್ರ ಅವರು ಶಿರಾ ತಾಲೂಕನ್ನು ಜಿಲ್ಲಾ ಕೇಂದ್ರವಾಗುವ ಹಂತಕ್ಕೆ ಅಬಿವೃದ್ಧಿಪಡಿಸಿದ್ದಾರೆ. ನೀರಾವರಿ, ಕೈಗಾರಿಕೆ, ರಸ್ತೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡುತ್ತಿದ್ದು, ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ಸಾರ್ವಜನಿಕರು ಆಗಮಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೆಂದು ತಿಳಿಸಿದರು. ಅಕ್ಷರ ಇಂಟರ್‍ನ್ಯಾಷನಲ್ ಶಾಲೆಯ ಕಾರ್ಯದರ್ಶಿ ಹರ್ಷ ಮಾತನಾಡಿ, ರೋಗಿಗಳಿಗೆ ಬಸ್ ನಿಲ್ದಾಣದಿಂದ ನಮ್ಮ ಶಾಲೆಯ ಬಸ್‍ಗಳಲ್ಲಿಯೇ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಶಿಬಿರಕ್ಕೆ ಆಗಮಿಸುವವರು ತಮ್ಮ ಬಿಪಿಎಲ್, ಎಪಿಲ್ ಹಾಗೂ ಆಧಾರ್ ಕಾರ್ಡ್‍ಗಳನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಅಪ್ಸಾ: 9535809204, ಗೀತಾ: 8861311742, ಸಿಬಿ: 7259548053, ಅನಿಲ್ ಕುಮಾರ್: 9632728383 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಟರಾಜ್ ಬರಗೂರು, ವೈದ್ಯೇಹಿ ಆಸ್ಪತ್ರೆಯ ಡಾ.ಹರೀಶ್, ನಗರಸಭೆ ಆಶ್ರಯ ಸಮಿತಿ ಸದಸ್ಯರಾದ ಜಯಲಕ್ಷ್ಮಿ, ಮಾಜಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಬಾಂಬೆ ರಾಜಣ್ಣ, ಮುಖಂಡರಾದ ಚನ್ನಪ್ಪ, ಮೂರ್ತಿ, ಸೇರಿದಂತೆ ಹಲವರು ಹಾಜರಿದ್ದರು.