ಹಲವು ಗ್ರಾಮಗಳಿಗೆ ಶುದ್ಧ ನೀರು ಒದಗಿಸುವ ಬೃಹತ್‌ ಯೋಜನೆ: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork |  
Published : Feb 24, 2025, 12:31 AM IST
951.98 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಿಸಲಿರುವ ನೀರು ಶುದ್ದೀಕರಣ ಘಟಕ ಕಾಮಗಾರಿಗೆ ಗುದ್ದಲಿಪೂಜೆ ಕಾರ್ಯಕ್ರಮ | Kannada Prabha

ಸಾರಾಂಶ

ತರೀಕೆರೆ, ತಾಲೂಕಿನ 156, ಕಡೂರಿನ 434, ಚಿಕ್ಕಮಗಳೂರು ತಾಲೂಕಿನ 146 ಗ್ರಾಮಗಳು ಮತ್ತು ತರೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಬೃಹತ್‌ ಯೋಜನೆಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯಗತಗೊಳ್ಳಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

₹951.98 ಕೋಟಿ ವೆಚ್ಚದ ನೀರು ಶುದ್ದೀಕರಣ ಘಟಕ ಕಾಮಗಾರಿಗೆ ಗುದ್ದಲಿಪೂಜೆ

ಕನ್ನಡಪ್ರಭ ವಾರ್ತೆ, ತರೀಕೆರೆ

ತರೀಕೆರೆ ತಾಲೂಕಿನ 156, ಕಡೂರಿನ 434, ಚಿಕ್ಕಮಗಳೂರು ತಾಲೂಕಿನ 146 ಗ್ರಾಮಗಳು ಮತ್ತು ತರೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಬೃಹತ್‌ ಯೋಜನೆಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯಗತಗೊಳ್ಳಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಭಾನುವಾರ ತಾಲೂಕಿನ ಬಾವಿಕೆರೆ ಗ್ರಾಪಂ ವ್ಯಾಪ್ತಿಯ ಅರಸೀಕೆರೆ ಗ್ರಾಮದಲ್ಲಿ ₹951,98 ಕೋಟಿ ವೆಚ್ಚದಲ್ಲಿ ನಿರ್ಮಿಸಲಿ ರುವ ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಬೃಹತ್ ಪ್ರಮಾಣದ ಈ ನೀರಾವರಿ ಯೋಜನೆಯಿಂದ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ದೊರಯಲಿದೆ. ಈ ಯೋಜನೆಯಿಂದ 60 ಓಹೆಚ್‌ಟಿ, 4 ಪಂಪಿಂಗ್ ಸ್ಟೇಷನ್ ನಿರ್ಮಾಣವಾಗಲಿವೆ ಎಂದು ತಿಳಿಸಿದರು.ಬಾವಿಕೆರೆ ಸಸ್ಯ ಕ್ಷೇತ್ರದಲ್ಲಿ ಹಿಂದಿನಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲಸಗಾರರಿಗೆ ಬೇರೆ ಯಾವುದಾದರೂ ಕೆಲಸ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಲಕ್ಕವಳ್ಳಿ ಹೋಬಳಿಯಲ್ಲಿ ಅರಣ್ಯ ಇಲಾಖೆಯಿಂದ ರೈತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಈ ಭಾಗದ ರೈತರಿಗೆ ಅನುಕೂಲ ಮಾಡಿ ಕೊಡುವುದಾಗಿ ಸಚಿವರು ತಿಳಿಸಿರುವುದಾಗಿ ಹೇಳಿದರು. ಬಾವಿಕೆರೆ ಗ್ರಾಪಂ ಮಾಜಿ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಬಾವಿಕೆರೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ದೊಡ್ಡ ಪ್ರಮಾಣದ ನಿವೇಶನ ರಹಿತರಿದ್ದಾರೆ. ಸದರಿ ಜಾಗವನ್ನು ಆಶ್ರಯ ನಿವೇಶನ ಹಾಗೂ ಮತ್ತಿತರೆ ಅಭಿವೃದ್ದಿ ಕಾರ್ಯ ಗಳಿಗೆ ಅತ್ಯಂತ ಸೂಕ್ತವಾಗಿತ್ತು. ಆದರೆ ಇದೇ ಜಾಗವನ್ನು ಕುಡಿಯುವ ನೀರಿನ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಬಳಕೆ ಮಾಡಿಕೊಂಡಿರುವುದರಿಂದ ನಿವೇಶನ ನೀಡಲು ಸೂಕ್ತ ಸ್ಥಳ ಒದಗಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಗೆ ಮನವಿ ಮಾಡಿದರು.ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ . ಯು.ಫಾರುಕ್ ಮಾತನಾಡಿ, ಅಭಿವೃದ್ಧಿ ಕೆಲಸಗಳಿಗೆ ಅಡೆತಡೆಗಳು ಸಹಜ. ಸಾರ್ವಜನಿಕ ಒಳಿತಿನ ಯೋಜನೆಗಳಿಗೆ ಎಲ್ಲರೂ ಬೆಂಬಲಿಸಬೇಕು ಎಂದು ತಿಳಿಸಿದರು.ಲಕ್ಕವಳ್ಳಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಮಂಜುನಾಥ್‌ ಲಾಡ್ ಮಾತನಾಡಿ, ಲಕ್ಕವಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ರೈತರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಶಾಸಕರು ಮುಂದಾಗಿದ್ದಾರೆ. ಲಕ್ಕವಳ್ಳಿ, ಕೆಂಚಿಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಅತ್ಯಗತ್ಯ ಅಭಿವೃದ್ದಿ ಕೆಲಸಗಳಿಗೆ ಬಳಕೆ ಮಾಡಿಕೊಳ್ಳಲು ಸೂಕ್ತ ಜಾಗ ಇಲ್ಲದಂತಾಗಿದೆ ಎಂದರು.ಪುರಸಭೆ ಸದಸ್ಯ ಲೋಕೇಶ್ ಮತ್ತಿತರರು ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಭದ್ರಪ್ಪ, ಸದಸ್ಯ ಭರತ್, ತರೀಕೆರೆ ಪುರಸಭೆ ನಾಮಿನಿ ಸದಸ್ಯರಾದ ಮಂಜುನಾಥ್, ಆದಿಲ್‌ಪಾಷಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಾದ ರಮೇಶ್, ಮುಖಂಡರಾದ ಹನುಮಂತೇಗೌಡ, ಜಯಸ್ವಾಮಿ, ಚಿನ್ನಪ್ಪ ಹಾಗೂ ಮತ್ತಿತರರು ಭಾಗವಹಿಸಿದ್ದರು.

23ಕೆಟಿಆರ್.ಕೆ.4ಃ

ತರೀಕೆರೆ ಸಮೀಪದ ಬಾವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸೀಕೆರೆ ಗ್ರಾಮದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ನೀರು ಶುದ್ಧೀಕರಣ ಘಟಕದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

PREV

Recommended Stories

79 ವರ್ಷಗಳ ನಂತ್ರ ಅಥಣಿಗೆ ಸರ್ಕಾರಿ ಪ್ರೌಢಶಾಲೆ!
ಪ್ರಜಾಪ್ರಭುತ್ವ ಉಳಿವಿಗೆ ಹೋರಾಟ ಅನಿವಾರ್ಯ