ರಾಜ್ಯಪಾಲರ ವಿರುದ್ಧ ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Aug 20, 2024, 12:46 AM IST
55 | Kannada Prabha

ಸಾರಾಂಶ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಷಡ್ಯಂತರ ರೂಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ರಾಜ್ಯಪಾಲರ ಹುದ್ದೆ ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯರವರನ್ನು ಹತ್ತಿಕ್ಕಲು ಸಂಚುರೂಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಂಜನಗೂಡು ಮೈಸೂರು ಹೆದ್ದಾರಿ ತಡೆ ನಡೆಸಿ ಬೃಹತ್ ಪ್ರತಿಭಟಿಸಿದರು.

ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿ ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಜಮಾಯಿಸಿದ ಸಾವಿರಾರು ಕಾರ್ಯಕರ್ತರು, ಬಿಜೆಪಿ, ರಾಜ್ಯಪಾಲರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಲು ಷಡ್ಯಂತರ ರೂಪಿಸಿದ್ದಾರೆ. ಅಲ್ಲದೇ ಗ್ಯಾರಂಟಿ ಯೋಜನೆಗಳ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ರಾಜ್ಯಪಾಲರ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಬಡವರು, ರೈತರು, ಕೂಲಿ ಕಾರ್ಮಿಕರ, ದಲಿತರ ಪರವಾಗಿ ಯೋಚಿಸುವಂತಹ ಒಬ್ಬ ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯರವರನ್ನು ಹತ್ತಿಕ್ಕಲು ಸಂಚುರೂಪಿಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಸಿ.ಎಂ. ಶಂಕರ್, ಜಿಪಂ ಮಾಜಿ ಸದಸ್ಯ ಕೆ. ಮಾರುತಿ, ತಾಪಂ ಮಾಜಿ ಅಧ್ಯಕ್ಷರಾದ ತಮ್ಮಣ್ಣೇಗೌಡ, ಬಿ.ಎಂ.ನಾಗೇಶ್ ರಾಜ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ತಾಪಂ ಮಾಜಿ ಸದಸ್ಯ ಎಚ್.ಎಸ್. ಮೂಗಶೆಟ್ಟಿ, ಮುಖಂಡರಾದ ಇಂದನ್ ಬಾಬು, ಕುಳ್ಳಯ್ಯ, ಶ್ರೀನಿವಾಸ್ ಮೂರ್ತಿ, ಎನ್.ಎಂ. ಮಂಜುನಾಥ್, ಕುರಿಹುಂಡಿ ರಾಜು, ಕೂಡ್ಲಾಪುರ ರಾಜು, ಚಿನ್ನಂಬಳ್ಳಿ ರಾಜು, ನಗರಸಭಾ ಮಾಜಿ ಉಪಾಧ್ಯಕ್ಷ ದೊರೆಸ್ವಾಮಿ, ನಗರಸಭಾ ಸದಸ್ಯರಾದ ಎನ್. ಶ್ರೀಕಂಠ, ಗಂಗಾಧರ್, ಎಸ್. ಪಿ.ಮಹೇಶ್, ಕಾರ್ಮಿಕ ಸಂಘಟನೆ ಅಧ್ಯಕ್ಷ ಗೋವಿಂದರಾಜು, ಗ್ರಾಪಂ ಸದಸ್ಯರಾದ ಮುದ್ದು ಮಾದಶೆಟ್ಟಿ, ಆನಂದ್, ಸುರೇಶ್ ಇದ್ದರು.ಮಂಚನಹಳ್ಳಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿಂದ ರಸ್ತೆತಡೆ

ಕನ್ನಡಪ್ರಭ ವಾರ್ತೆ ಕೆ.ಆರ್.ನಗರ

ಪ್ರಾಮಾಣಿಕ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ವಿರುದ್ಧ ತಾಲೂಕಿನ ಮಂಚನಹಳ್ಳಿಯಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಹಾಸನ- ಮೈಸೂರು ರಸ್ತೆಯಲ್ಲಿ ವಾಹನಗಳನ್ನು ತಡೆದು ರಸ್ತೆ ಮಧ್ಯೆ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಅವರುಗಳು ರಾಜ್ಯಪಾಲರ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು, ಸ್ಳಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿದರು.

ಗ್ರಾಪಂ ಮಾಜಿ ಸದಸ್ಯ ಎಂ. ಎಸ್.ಅನಂತ, ಮುಖಂಡರಾದ ಧನು, ಅನಂತ, ರಮೇಶ್, ಮಹದೇವ, ಶಂಕರ್, ರವಿ, ಮಂಜು, ಕಾಳೇಗೌಡ, ವೀರಭದ್ರ, ಎಂ.ಎಸ್.ಮಂಜು, ಬೋರಣ್ಣ, ಗಜ, ಅಭಿಷೇಕ್, ರಾಜೇಶ್ , ರಮೇಶ್, ಅವಿನಾಶ್, ರಾಘು, ಮತ್ತು ಗ್ರಾಮದ ಲೋಡರ್ಸ್ ಸಂಘದವರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ