ಪೂರ್ವಭಾವಿ ಸಭೆಯಲ್ಲಿ ನಿರ್ಧಾರ: ಅಪರ ಜಿಲ್ಲಾಧಿಕಾರಿಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಮಾ.12ರಂದು ರೇಣುಕಾಚಾರ್ಯ ಜಯಂತಿಯನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದಲ್ಲಿ, 14ರಂದು ಯೋಗಿನಾರೇಯಣ ಯತೀಂದ್ರ ಜಯಂತಿ ನಗರದ ಬಲಿಜ ಭವನದಲ್ಲಿ ಮತ್ತು 28ರಂದು ಅಗ್ನಿಬನ್ನಿರಾಯ ಜಯಂತಿಯನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದಲ್ಲಿ ಅರ್ಥಪೂರ್ಣ ಆಚರಣೆಗೆ ಕ್ರಮ ವಹಿಸಲಾಗುವುದು ಎಂದರು.ರೇಣುಕಾಚಾರ್ಯ, ಯೋಗಿನಾರೇಯಣ ಯತೀಂದ್ರ ಮತ್ತು ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮಗಳ ಅಂಗವಾಗಿ ಭವ್ಯವಾದ ಮೆರವಣಿಗೆ ನಡೆಯಲಿದ್ದು, ರಸ್ತೆ ಸಂಚಾರ ಮಾರ್ಗಕ್ಕೆ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.
ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಮತ್ತಿತರರಿದ್ದರು.